ರಾಷ್ಟ್ರೀಯ

ಯುವತಿಯ ಮೇಲೆ ಅತ್ಯಾಚಾರ ಎಸಗಿ ಅಕೆಗೆ ಬೆಂಕಿ ಹಚ್ಚಿದ ಯುವಕನ ಬಂಧನ

Pinterest LinkedIn Tumblr

ಲಕ್ನೋ: ಹದಿನಾರು ವರ್ಷದ ಯುವತಿಯ ಮೇಲೆ ನೆರೆಯವರೇ ಅತ್ಯಾಚಾರ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ಪ್ರಕರಣ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನಖಾಸ ಎಂಬಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಅಮಾನುಷ ಕೃತ್ಯ ನಡೆದಿದ್ದು, ತೀವ್ರ ಸುಟ್ಟಗಾಯಗಳಾಗಿರುವ ಯುವತಿಯನ್ನು ದೆಹಲಿಯ ಸಪ್ಧರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯವೂ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಯುವತಿ ಒಬ್ಬಳೇ ಮನೆಯಲ್ಲಿದ್ದ ಸಂದರ್ಭದಲ್ಲಿ ನೆರೆಮನೆಯ ಝೀಶನ್ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೆಚ್ಚುವರಿ ಎಸ್ಪಿ ಅಲೋಕ್ ಜೈಸ್ವಾಲ್ ಹೇಳಿದ್ದಾರೆ. ಸಂತ್ರಸ್ತೆ ಯುವತಿಗೆ ಶೇಕಡ 70ರಷ್ಟು ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆ ಯುವತಿ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದಾಗ ಆರೋಪಿ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ. ತಕ್ಷಣವೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ಹಾಗೂ ಬಳಿಕ ದೆಹಲಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಎಂದು ವಿವರಿಸಿದ್ದಾರೆ.

ಯುವತಿಯ ತಾಯಿ ಹಾಗೂ ಅಣ್ಣ ಪಕ್ಕದ ಗ್ರಾಮದಲ್ಲಿ ಸಮಾರಂಭವೊಂದಕ್ಕೆ ಹೋಗಿದ್ದಾಗ ಯುವತಿ ಒಬ್ಬಂಟಿಯಾಗಿದ್ದನ್ನು ಗಮನಿಸಿ ಸಮಯ ಸಾಧಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Comments are closed.