ರಾಷ್ಟ್ರೀಯ

ಹೈದರಾಬಾದ್ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಪೊಲೀಸರಿಗೆ ಐಸಿಯುನಲ್ಲಿ ಚಿಕಿತ್ಸೆ

Pinterest LinkedIn Tumblr


ಹೈದರಾಬಾದ್: ಪಶುವೈದ್ಯೆ ಅತ್ಯಾಚಾರಿಗಳ ಎನ್‍ಕೌಂಟರ್ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಪೊಲೀಸರು ಐಸಿಯುನಲ್ಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಎನ್‍ಕೌಂಟರ್‍ನಲ್ಲಿ ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸಾದ್ನಾಗರ್ ಆಸ್ಪತ್ರೆಯಿಂದ ಹೈದರಾಬಾದ್‍ನ ಕೇರ್ ಆಸ್ಪತ್ರಗೆ ದಾಖಲಿಸಲಾಗಿದೆ. ಸದ್ಯ ಆಸ್ಪತ್ರೆಯು ಮೆಡಿಕಲ್ ಬುಲೆಟಿನ್ ನೀಡಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದೆ.

35 ವರ್ಷದ ವೆಂಕಟೇಶ್ವರಲು ಅವರಿಗೆ ತಲೆಗೆ ಗಾಯವಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಅರವಿಂದ್ ಗೌಡ ಅವರ ಎಡಗೈ ಹಾಗೂ ಭುಜಕ್ಕೆ ಗಾಯವಾಗಿದೆ. ಇರಬ್ಬರನ್ನೂ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್, ಪ್ರಕರಣದಲ್ಲಿ ಪೊಲೀಸ್ ಎಸ್‍ಐ ಸೇರಿದಂತೆ ಮತ್ತೊಬ್ಬ ಅಧಿಕಾರಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಶಿಫ್ಟ್ ಮಾಡಲಾಗಿದೆ. ಅಲ್ಲದೇ ಪೊಲೀಸರಿಗೆ ಯಾವುದೇ ಬುಲೆಟ್ ಗಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Comments are closed.