
ಬುಲಂದ್’ಶೆಹರ್: ಉತ್ತರಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಉನ್ನಾವೋ ಬಳಿಕ ಇದೀಗ ಬುಲಂದ್ ಶೆಹರ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
14 ವರ್ಷದ ಬಾಲಕಿಯನ್ನು ಒತ್ತೆಯಾಳಾಗಿರಿಸಿಕೊಂಡಿರುವ ಕಾಮುಕರು, ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಅತ್ಯಾಚಾರದ ವಿಡಿಯೋವನ್ನು ಕಾಮುಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಡಿಸೆಂಬರ್ 3 ರಂದು ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಪ್ರಕರಣ ಸಂಬಂಧ ಈವರೆಗೂ ನಾಲ್ವರು ಅಪ್ರಾಪ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
Comments are closed.