
ನವದೆಹಲಿ: ಇತ್ತೀಚೆಗೆ ದೇಶಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟ ಮಾಜಿ ಶಾಸಕ ಕುಲ್ ದೀಪ್ ಸಿಂಗ್ ಸೆನ್ಗಾರ್ ತೀರ್ಪನ್ನು ದೆಹಲಿ ಕೋರ್ಟ್ ಮಂಗಳವಾರ ಕಾಯ್ದಿರಿಸಿದ್ದು, ಡಿಸೆಂಬರ್ 16ರಂದು ತೀರ್ಪನ್ನು ಘೋಷಿಸುವುದಾಗಿ ತಿಳಿಸಿದೆ.
2017ರಲ್ಲಿ ಅಪ್ರಾಪ್ತೆ ಮೇಲೆ ಸೆನ್ಗಾರ್ ಅತ್ಯಾಚಾರ ಎಸಗಿದ್ದ. 2019ರ ಜುಲೈನಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಕೋರ್ಟ್ ಗೆ ತನ್ನ ವಕೀಲರು ಹಾಗೂ ಕುಟುಂಬದವರ ಜತೆ ಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್ ಹರಿಸಲಾಗಿತ್ತು. ಈ ಘಟನೆಯಲ್ಲಿ ಆಕೆ ಆಸ್ಪತ್ರೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಇಬ್ಬರು ಚಿಕ್ಕಮ್ಮ ಸಾವನ್ನಪ್ಪಿದ್ದರು.
ನಂತರ ಉನ್ನಾವ್ ರೇಪ್ ಸಂತ್ರಸ್ತೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿದ್ದಳು.
ಮತ್ತೆ ದಾಳಿ, ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿದ್ದರು:
ಡಿಸೆಂಬರ್ 5ರಂದು ಉತ್ತರಪ್ರದೇಶದ ರಾಯ್ ಬರೇಲಿ ಕೋರ್ಟ್ ಗೆ ಹೋಗುವ ಮಾರ್ಗದಲ್ಲಿ ಉನ್ನಾವ್ ರೇಪ್ ಸಂತ್ರಸ್ತೆ ಮೇಲೆ ಐವರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಇದರಲ್ಲಿ 2019ರಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳು ಮತ್ತು ಮೂವರು ಸ್ನೇಹಿತರು ಸೇರಿದ್ದರು. ಜಾಮೀನು ಮೇಲೆ ಹೊರಬಂದಿದ್ದ ಇಬ್ಬರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದರು.
ಆಕೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ಡಿಸೆಂಬರ್ 6ರಂದು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಉನ್ನಾವ್ ರೇವ್ ಸಂತ್ರಸ್ತೆ ಸಾವನ್ನಪ್ಪಿದ್ದಳು. ತಾನು ಯಾವುದೇ ಕಾರಣಕ್ಕೂ ಸಾಯಬಾರದು, ನಾನು ಆರೋಪಿಗಳನ್ನು ನೇಣಿಗೇರಿಸುವುದನ್ನು ಕಣ್ಣಾರೆ ನೋಡಬೇಕು. ಅಲ್ಲದೇ ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡಬಾರದು ಎಂದು ಸಾಯುವ ಮುನ್ನ ತನ್ನ ಸಹೋದರನಲ್ಲಿ ಕೊನೆಯದಾಗಿ ಹೇಳಿದ್ದಳು.
ಈ ಘಟನೆ ಬಗ್ಗೆ ಉತ್ತರಪ್ರದೇಶ ಸೇರಿದಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಆಕೆಯ ಬೇಡಿಕೆಗಳನ್ನು ಈಡೇರಿಸುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದ ಮೇಲೆ ಡಿಸೆಂಬರ್ 8ರಂದು ಉನ್ನಾವ್ ನಲ್ಲಿ ಬಿಗಿ ಭದ್ರತೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಉತ್ತರ ಪ್ರದೇಶ ಸರ್ಕಾರದ ಇಬ್ಬರು ಸಚಿವರಾದ ಸ್ವಾಮಿ ಪ್ರಸಾದ್ ಮತ್ತು ಕಮಲ್ ರಾಣಿ ವರುಣ್ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಆರೋಪಿಗಳಿಗೆ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದರು.
Comments are closed.