ರಾಷ್ಟ್ರೀಯ

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ 50 ವಿದ್ಯಾರ್ಥಿಗಳ ಬಿಡುಗಡೆ !

Pinterest LinkedIn Tumblr

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ಮಾಡಲೊರಟ ನೂತನ ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ 50 ವಿದ್ಯಾರ್ಥಿಗಳನ್ನು ಇಂದು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬಂಧನಕ್ಕೀಡಾಗಿದ್ದ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಿಡುಗಡೆಯಾದ ಮೇಲೂ ಜಾಮಿಯ ಮಿಲಿಯಾ ಇಸ್ಲಾಮಿಯ ವಿವಿ ಆವರಣದಲ್ಲಿ ಪ್ರತಿಭಟನೆ ಮುಂದುವರೆದಿದೆ. ಹಾಗಾಗಿ ಪೊಲೀಸರು ಜಾಮಿಯ ಮಿಲಿಯಾ ಇಸ್ಲಾಮಿಯ ವಿಶ್ವವಿದ್ಯಾಲಯ ಸೇರಿದಂತೆ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.

ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್​​ ಬಂದೋಬಸ್ತ್​​​​ ಆಯೋಜಿಸಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ಹಿಂಸಾತ್ಮಕ ಇನ್ನೂ ತಣ್ಣಗಾಗದ ಹೊತ್ತಲ್ಲೇ ದೆಹಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದೆಹಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಜಾಮಿಯ ಮಿಲಿಯಾ ಇಸ್ಲಾಮಿಯ ವಿದ್ಯಾರ್ಥಿಗಳ ಮೇಲೆ ಫೈರ್​​ ಮಾಡಿದ್ದಾರೆ. ಅಲ್ಲದೇ ಟಿಯರ್​​ ಗ್ಯಾಸ್​​​ ಮತ್ತು ಲಾಠಿ ಪ್ರಹಾರವೂ ಮಾಡಲಾಗಿದೆ. ಇಲ್ಲಿನ ಪ್ರತಿಭಟನೆಯೂ ಹಿಂಸಾಚಾರಕ್ಕೆ ತಿರುಗಿ ನೂರಾರು ವಿದ್ಯಾರ್ಥಿಗಳು ತೀವ್ರ ಗಾಯಾಗೊಂಡಿದ್ದಾರೆ.

ಇನ್ನೂ​ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆ ಪಶ್ಚಿಮ ಬಂಗಾಳಕ್ಕೂ ವಿಸ್ತರಣೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ಸ್ವರೂಪ ಹಿಂಸಾಚರಕ್ಕೆ ತಿರುಗಿದೆ. ಹಾಗಾಗಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ 24 ಗಂಟೆಗಳ ಕಾಲ ಇಂಟರ್‌ನೆಟ್ ಸ್ಥಗಿತಗೊಳಿ ಆದೇಶಿಸಿದೆ.

ಪಶ್ಚಿಮ ಬಂಗಾಳದ ಮಾಲ್ದಾ, ಮುರ್ಶಿದಾಬಾದ್, ಉತ್ತರ ದಿನಜ್‌ಪುರದಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ರೈಲು ತಡೆದು ಕಲ್ಲು ತೂರಾಟ ನಡೆಸಿದ್ಧಾರೆ. ರಾಷ್ಟ್ರೀಯ ಹೆದ್ದಾರಿಗಳ ಟೋಕ್​​ ಪ್ಲಾಜಾ ಧ್ವಂಸಕ್ಕೆ ಯತ್ನಿಸಲಾಗಿದೆ. ಮುರ್ಶಿದಾಬಾದ್‌ನಲ್ಲಿ 10-15 ಬಸ್‌ಗಳಿಗೆ ಬೆಂಕ ಹಚ್ಚಲಾಗಿದೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ಹಾಗೆಯೇ ಪರಿಸ್ಥಿತಿ ಬಿಗಡಾಯಿಸುತ್ತಿರುವ ಕಡೆ ಎರಡು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ದೇಶಾದ್ಯಂತ ತೀವ್ರ ಗಲಭೆಗೆ ಕಾರಣದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ. ಹಾಗೆಯೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬೆನ್ನಲೇ ಸಿಎಂ ಮಮತಾ ಬ್ಯಾನರ್ಜಿ ಈ ನಿರ್ಧಾರ ಘೋಷಣೆ ಮಾಡಿದ್ದಾರೆ.

ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನ ಜಾರಿಗೊಳಿಸಲೇಬೇಕೆಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ. ಈ ಕಾಯ್ದೆಯೂ ಭಾರತದ ಸಂವಿಧಾನಕ್ಕೆ ಧಕ್ಕೆ ಉಂಟುಮಾಡುತ್ತದೆ. ಹಾಗಾಗಿ ತಾವು ಯಾವುದೇ ಕಾರಣಕ್ಕೂ ತಮ್ಮ ರಾಜ್ಯದಲ್ಲಿ ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Comments are closed.