ನವ ದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಆರೋಪಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೋರ್ಟ್ ಕೊಠಡಿಯಲ್ಲಿ ಗಳಗಳನೇ ಅತ್ತಿದ್ದಾರೆ.
ತನ್ನ ತಂಗಿಯರೊಂದಿಗೆ ಸೆಂಗರ್ ಅಳುತ್ತಿರುವ ದೃಶ್ಯ ಕಂಡುಬಂದಿದೆ. ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಐಪಿಸಿ ಹಾಗೂ ಪೊಕ್ಸೊ ಕಾಯ್ದೆಯಡಿ ಸೆಂಗರ್ ಪ್ರಮುಖ ಆರೋಪಿಯಾಗಿರುವ ಸೆಂಗರ್ ಅವರನ್ನು ದೋಷಿ ಎಂದು ನ್ಯಾಯಾಲಯ ಪರಿಗಣಿಸಿದೆ.
ಆದಾಗ್ಯೂ, ಮತ್ತೊಬ್ಬ ಆರೋಪಿ ಶಶಿ ಸಿಂಗ್ ಅವರನ್ನು ಎಲ್ಲಾ ಆರೋಪಗಳಿಂದ ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ಖುಲಾಸೆಗೊಳಿಸಿದ್ದಾರೆ.
ಬುಧವಾರ ಶಿಕ್ಷೆಯ ಪ್ರಮಾಣ ನಿಗದಿ ಕುರಿತಂತೆ ವಿಚಾರಣೆ ನಡೆಯಲಿದೆ. ಪೊಕ್ಸೊ ಕಾಯ್ದೆಯಡಿ ಗರಿಷ್ಠ ಎಂದರೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ.
Comments are closed.