
ವಿಜಯಪುರ: ವೇಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ರೇಲ್ವೆ ನಿಲ್ದಾಣದ ಬಳಿ ನಾಡಗೌಡ ರೋಡಲೈನ್ಸ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ವಿಜಯಪುರ ರಾಜೂ ಗಿಡ್ಡೆ ಹಾಗೂ ಉತ್ತರ ಪ್ರದೇಶದ ವೀರೇಂದ್ರ ಪ್ರಜಾಪತಿ ಎಂದು ಗುರುತಿಸಲಾಗಿದೆ. ವಿಶ್ವಾನಾಥ ಬಡಿಗೇರ, ಪ್ರಕಾಶ ಶಿರೋಳ ಹಾಗೂ ಬಸವರಾಜ ಡೊಣೂರ ಎಂಬುವವರಿಗೆ ಸಣ್ದಪುಟ್ಟ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಎಥಿನಾಲ್ ಖಾಲಿ ಮಾಡಿದ ಬಳಿಕ ಗ್ಯಾರೇಜ್ ಗೆ ತಂದು ಟ್ಯಾಂಕರ್ನ್ನು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಮೃತಪಟ್ಟವರು ಗ್ಯಾರೇಜ್ ನಲ್ಲಿ ಟ್ಯಾಂಕರ್ಗೆ ವೆಲ್ಡಿಂಗ್ ಮಾಡುತ್ತಿದ್ದರು ಈ ಸಂದರ್ಭದಲ್ಲಿ ಬ್ಲಾಸ್ಟ್ ಆಗಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಭಾರೀ ಸ್ಪೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್ಪಿ ಪ್ರಕಾಶ ಅಮ್ರಿತ ನಿಕ್ಕಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಎಸ್ಪಿ ಹೇಳಿದ್ದಾರೆ.
Comments are closed.