
ಹೈದರಾಬಾದ್: ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಯ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆಗೆ ತೆಲಂಗಾಣ ಹೈಕೋರ್ಟ್ ಆದೇಶಿಸಿದೆ.
ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿಗಳ ಮೃತದೇಹಗಳ ಮರು ಮರಣೋತ್ತರ ಪರೀಕ್ಷೆಯನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಯ ಫೊರೆನ್ಸಿಕ್ ತಜ್ಞ ವೈದ್ಯರ ತಂಡದಿಂದ ನೆರವೇರಿಸುವಂತೆ ಹೈಕೋರ್ಟ್ ಶನಿವಾರ ಆದೇಶ ನೀಡಿದೆ.
ಈ ಮರು ಮರಣೋತ್ತರ ಪರೀಕ್ಷೆಯನ್ನು 48 ಗಂಟೆಗಳ ಒಳಗಾಗಿ, ಅಂದರೆ ಡಿಸೆಂಬರ್ 23ರ ಸೋಮವಾರ ಸಾಯಂಕಾಲ 5 ಗಂಟೆಯೊಳಗಾಗಿ ನಡೆಸುವಂತೆ ನ್ಯಾಯಾಲವು ತನ್ನ ಆದೇಶದಲ್ಲಿ ತಿಳಿಸಿದೆ.
ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮತ್ತು ಮೃತದೇಹಗಳನ್ನು ಅವರವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವಂತೆ ತೆಲಂಗಾಣ ಹೈಕೋರ್ಟಿನ ಮುಖ್ಯನ್ಯಾಯಮೂರ್ತಿ ರಾಘವೇಂದ್ರ ಸಿಂಘ್ ಚೌಹಾಣ್ ಹಾಗೂ ನ್ಯಾಯಮೂರ್ತಿ ಎ. ಅಭಿಷೇಕ್ ರೆಡ್ಡಿ ನೇತೃತ್ವದ ವಿಭಾಗೀಯ ಪೀಠವು ಆದೇಶ ನೀಡಿತು.
Comments are closed.