ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ಮಾಡಿದ ಕೇರಳದ ದಂಪತಿ !

Pinterest LinkedIn Tumblr

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೇರಳದ ದಂಪತಿ ಮಾಡಿಸಿರುವ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ವೈರಲ್ ಆಗಿದೆ.

ಸುಂದರವಾದ ಪೊನ್ಮುಡಿ ಬೆಟ್ಟದ ಮುಂಭಾಗ ‘ಪೌರತ್ವ ತಿದ್ದುಪಡಿ ಕಾಯ್ದೆ ಬೇಡ’, ‘ಎನ್ ಆರ್ ಸಿ ಬೇಡ’ ಎಂಬ ಫಲಕಗಳನ್ನು ಹಿಡಿದು ಪೋಟೋಗೆ ಪೋಸ್ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಡಿಸೆಂಬರ್ 18 ರಂದು ಅರುಣ್ ಗೋಪಿ ಹಾಗೂ ಆಶಾ ಶೇಖರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಈ ಪೋಟೋಗಳನ್ನು ಹಂಚಿಕೊಂಡಿಕೊಂಡಿದ್ದರು. ನಂತರ ಈ ಪೋಟೋಗಳು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ಸಕಾರಾತ್ಮಕ ಮತ್ತು ಋಣಾತ್ಮಕ ಅಭಿಪ್ರಾಯಗಳು ಕೇಳಿಬರುತ್ತಿವೆ.

ತಿರುವನಂತಪುರಂ ಜಿಲ್ಲಾ ಮಕ್ಕಳ ಕಲ್ಯಾಣ ಮಂಡಳಿಯ ಖಜಾಂಚಿಯಾಗಿರುವ ಅರುಣ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಧೀನದಲ್ಲಿರುವ ಮಕ್ಕಳ ಸಂಸ್ಥೆ ಬಾಲಸಂಘಂನ ರಾಜ್ಯಾಧ್ಯಕ್ಷರಾಗಿದ್ದಾರೆ.

Comments are closed.