ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ಉತ್ತರಪ್ರದೇಶದಲ್ಲಿ ಸಾಮಾಜಿಕ ಜಾಲತಾಣದ 20 ಸಾವಿರ ಪೋಸ್ಟ್ ವಿರುದ್ಧ ಕ್ರಮ

Pinterest LinkedIn Tumblr


ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದವರ ವಿರುದ್ಧ ಉತ್ತರಪ್ರದೇಶ ಪೊಲೀಸರು ಸತತವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಸುಮಾರು 20,950 ಜನರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ಬಿಡುಗಡೆ ಮಾಡಿರುವ ಅಂಕಿಅಂಶ ತಿಳಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಈವರೆಗೆ 95 ಪ್ರಕರಣಗಳು ದಾಖಲಾಗಿದೆ. 10, 380 ಟ್ವೀಟರ್ ಪೋಸ್ಟ್, 10,339 ಫೇಸ್ ಬುಕ್ ಪೋಸ್ಟ್ ಮತ್ತು ಯೂಟ್ಯೂಬ್ ನಲ್ಲಿ 181 ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿದೆ ಎಂದು ವಿವರಿಸಿದೆ.

ಈಗಾಗಲೇ ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಪ್ರತಿಭಟನಾಕಾರರ ಆಸ್ತಿ ಜಪ್ತಿ ಮಾಡುವ ಕ್ರಮಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಘಟನೆಯಲ್ಲಿ 498 ಪ್ರಕರಣ ದಾಖಲಾಗಿದೆ. ಸುಮಾರು 5558 ಜನರನ್ನು ವಶಕ್ಕೆ ಪಡೆಯಲಾಗಿದ್ದು, 1246 ಮಂದಿಯನ್ನು ಬಂಧಿಸಲಾಗಿದೆ. ವಿಚಾರಣೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದ್ದು, ಈ ಪ್ರಕರಣದ ಬಗ್ಗೆ ಎಸ್ ಐಟಿ ರಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

Comments are closed.