ರಾಷ್ಟ್ರೀಯ

ಭೂ ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಮನೋಜ್ ಮುಕುಂದ್

Pinterest LinkedIn Tumblr

ನವದೆಹಲಿ: ಭಾರತೀಯ ಸೇನಾಪಡೆಯ ನೂತನ ಮುಖ್ಯಸ್ಥರಾಗಿ ಲೆ.ಜ.ಮನೋಜ್ ಮುಕುಂದ್ ನರವಾಣೆಯವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಹಾಲಿ ಸೇನಾ ಮುಖ್ಯಸ್ಥ ಜ.ರಾವತ್ ಮಂಗಳವಾರ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಲೆ.ಜ.ಮನೋಜ್ ನೇಮಕಗೊಂಡಿದ್ದಾರೆ.

ಸೇನೆಯಲ್ಲಿ 37 ವರ್ಷ ಸೇವೆಯ ಅನುಭವ ಹೊಂದಿರುವ ಲೆ.ಜ.ಮನೋಜ್ ಈ ಅವಧಿಯಲ್ಲಿ ಚೀನಾ ಗಡಿ, ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಮಹತ್ವದ ಹುದ್ದೆ ನಿರ್ವಹಿಸಿದ್ದಾರೆ. ಇವರಿಗೆ ಈಗಾಗಲೇ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಠ ಸೇವಾ ಪದಕಗಳು ಸಂದಿವೆ.

ನರವಾಣೆಯವರು ಸೇನಾಯ ಉಪ ಮುಖ್ಯಸ್ಥರಾಗುವುದಕ್ಕೂ ಮುನ್ನ ಕೋಲ್ಕತಾದಲ್ಲಿ ಪ್ರಧಾನ ಕಚೇರಿಯಿರುವ ಭೂಸೇನೆಯ ಪೂರ್ವ ಕಮಾಂಡ್’ನ ಕಮಾಂಡರ್ ಆಗಿದ್ದರು. ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ವಿರುದ್ಧ ಕಾರ್ಯಾಚರಣೆಗಳ ತಂತ್ರದ ರೂವಾರಿಯಾಗಿದ್ದರು.

Comments are closed.