ರಾಷ್ಟ್ರೀಯ

ಕಾಶ್ಮೀರದಲ್ಲಿ ಪಾಕಿಸ್ತಾನಿ ನುಸುಳುಕೋರರು-ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ; ಇಬ್ಬರು ಯೋಧರು ಹುತಾತ್ಮ

Pinterest LinkedIn Tumblr

ಜಮ್ಮು: ಹೊಸ ವರ್ಷದ ಆರಂಭದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ದುರಂತ ಘಟನೆ ನಡೆದಿದೆ. ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (ಎಲ್​ಒಸಿ) ಬಳಿ ಪಾಕಿಸ್ತಾನಿ ನುಸುಳುಕೋರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ನುಸುಳುಕೋರರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದಾಗ ಖಾರಿ ಥ್ರಾಯತ್ ಕಾಡಿನಲ್ಲಿ ಅವರನ್ನು ತಡೆಹಿಡಿಯಲಾಗಿದೆ. ಭಾರತೀಯ ಸೇನೆಯು ಉಗ್ರರು ಅಡಗಿರುವ ಜಾಗವನ್ನು ಸುತ್ತುವರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಯೋಧರು ಹುತಾತ್ಮರಾಗಿದ್ದು ನೌಶೇರಾ ಪ್ರಾಂತ್ಯದಲ್ಲಿ ಶೋಧ ಕಾರ್ಯಾಚರಣೆ ಸಾಗುತ್ತಿದೆ. ಶೊಧ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಲೆಫ್ಟಿನೆಂಟ್​ ಕರ್ನಲ್​​ ದೇವೇಂದರ್​ ಆನಂದ್​​ ತಿಳಿಸಿದ್ದಾರೆ.

ಶಂಕಿತ ಭಯೋತ್ಪಾದಕರ ಚಲನವಲನ ಕುರಿತ ಮಾಹಿತಿಯ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ನೂತನ ಸೇನಾ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​​ ನಾರವಾನೆ ಪೂರ್ವಭಾವಿಯಾಗಿ ದಾಳಿ ನಡೆಸುವ ಹಕ್ಕನ್ನು ಭಾರತ ಹೊಂದಿದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಮರುದಿನವೇ ಈ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Comments are closed.