ರಾಷ್ಟ್ರೀಯ

ಪ್ರಧಾನಿ ಮೋದಿ, ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೆಲ್ಲೈ ಕಣ್ಣನ್​ಗೆ ನ್ಯಾಯಾಂಗ ಬಂಧನ

Pinterest LinkedIn Tumblr

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ನೀಲೈ ಕಣ್ಣನ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಮಧ್ಯೆ, ಪೊಲೀಸರ ಪೂರ್ವಾನುಮತಿ ಇಲ್ಲದೆ, ಮರೀನಾದಲ್ಲಿ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲು ಯತ್ನಿಸಿದ 300ಕ್ಕೂ ಹೆಚ್ಚು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದಕುಕೊಂಡಿದ್ದಾರೆ.

ಸೆಕ್ಷನ್ 143, 145 ಹಾಗೂ 341ಗಳಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ರಾಜ್ಯಸಭಾ ಸದಸ್ಯ ಎಲ್.ಗಣೇಶನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್, ಸಿ.ಪಿ.ರಾಧಾಕೃಷ್ಣನ್ ಮತ್ತಿತರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

Comments are closed.