ರಾಷ್ಟ್ರೀಯ

ಅಮೆರಿಕ-ಇರಾನ್ ನಡುವಣ ಪ್ರಕ್ಷುಬ್ಧ ಪರಿಸ್ಥಿತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

Pinterest LinkedIn Tumblr


ನವದೆಹಲಿ: ಇರಾನಿನ ಸೇನಾ ಕಮಾಂಡರ್ ಖಾಸಿಂ ಸುಲೈಮಾನಿಯನ್ನು ಅಮೆರಿಕಾ ಹತ್ಯೆ ಗೈದ ಬಳಿಕ ಉಭಯ ರಾಷ್ಟ್ರಗಳ ನಡುವಣ ಪ್ರಕ್ಷುಬ್ದ ಪರಿಸ್ಥಿತಿ ಬಿಗಡಾಯಿಸಿದ್ದು, ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ಸಚಿವ ಎಸ್ . ಜೈಶಂಕರ್ ಇಂದು ಇರಾನ್ ವಿದೇಶಾಂಗ ಸಚಿವ ಜಾವದ್ ಝರಿಪ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಆ ರಾಷ್ಟ್ರದಲ್ಲಿನ ಉದ್ವಿಗ್ನತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ಅಮೆರಿಕಾ ಹಾಗೂ ಇರಾನ್ ನಡುವಣ ಬೆಳವಣಿಗೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಂಪರ್ಕದಲ್ಲಿ ಇರಲು ಒಪ್ಪಿಕೊಂಡಿದ್ದೇವೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಅಮೆರಿಕಾದ ದಾಳಿಯಲ್ಲಿ ಇರಾನ್ ಸೇನೆಯ ಕಮಾಂಡರ್ ಸುಲೈಮಾನಿ ಹತ್ಯೆಯಾದ ನಂತರ ಭಾರತ ಹಾಗೂ ಇರಾನ್ ದೇಶಗಳ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ನಮ್ಮ ಮೇಲೆ ಪ್ರತಿ ದಾಳಿ ನಡೆಸಿದ್ದೇ ಆದರೆ, ಇರಾನ್ ರಾಷ್ಟ್ರದ 52 ತಾಣಗಳು ಹಾಗೂ ಸಾಂಸ್ಕೃತಿಕ ಪ್ರದೇಶಗಳು ಕ್ಷಣಾರ್ಧದಲ್ಲಿ ಧ್ವಂಸಗೊಳ್ಳುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಪ್ರತಿದಾಳಿಗೆ ಸಂಚು ರೂಪಿಸುತ್ತಿರುವ ಇರಾನ್ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸುಲೈಮಾನಿ ಹತ್ಯೆ ಅಮೆರಿಕಾ ಹಾಗೂ ಇರಾನ್ ನಡುವಣ ಪರಿಸ್ಥಿತಿ ಉದ್ವಿಗ್ನಗೊಳ್ಳಲು ಪ್ರಮುಖ ಕಾರಣವಾಗಿದೆ.

Comments are closed.