ರಾಷ್ಟ್ರೀಯ

ಹಲ್ಲೆಗೊಳಗಾದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್​​​​ ಘೋಷ್ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್​​​

Pinterest LinkedIn Tumblr

ನವದೆಹಲಿ: ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್​​ನೊಳಗೆ ಕಿಡಿಗೇಡಿಗಳಿಂದ ತೀವ್ರ ಹಲ್ಲೆಗೊಳಗಾದ ಜೆಎನ್​​​ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್​​​ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ಮುಸುಕುಧಾರಿಗಳು ಕ್ಯಾಂಪಸ್​​ಗೆ ನುಗ್ಗಿ ಹಿಂಸಾಚಾರ ನಡೆಸುವ ಮುನ್ನ ದಿನ ಜನವರಿ 4ನೇ ತಾರಿಕು ಜೆಎನ್​​ಯು ಸರ್ವರ್‌ ಕೊಠಡಿಯಲ್ಲಿ ಐಶೆ ಘೋಷ್​​​​​ ಸೇರಿದಂತೆ 19 ಮಂದಿ ದಾಂದಲೆ ನಡೆಸಿದರು. ಈ ಆರೋಪದ ಮೇಲೆ ಐಶೆ ಘೋಷ್​​​ ಮತ್ತಿತರ ವಿರುದ್ಧ ದೆಹಲಿ ಪೊಲೀಸರು ಎಫ್​​ಐಆರ್​​ ದಾಖಲಿಸಿಕೊಂಡಿದ್ದಾರೆ. ಕ್ಯಾಂಪಸ್​​ನಲ್ಲಿ ಹಿಂಸಾಚಾರ ತಡೆಯಲು ಪೊಲೀಸರು ಪ್ರಯತ್ನಿಸಲಿಲ್ಲ ಎಂದು ಟೀಕೆಗಳು ಕೇಳಿ ಬಂದ ಬೆನ್ನಲ್ಲೀಗ ಇಂತಹುದ್ದೊಂದು ಬೆಳವಣಿಗೆ ನಡೆದಿದೆ. ಸದ್ಯ ತೀವ್ರ ಹಲ್ಲೆಗೊಳಗಾದ ವಿದ್ಯಾರ್ಥಿಗಳ ಮೇಲೆಯೆ ಎಫ್​ಐಆರ್​​ ದಾಖಲಿಸಿಕೊಂಡ ಪೊಲೀಸರ ನಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಈಗಾಗಲೇ ಜೆಎನ್​​ಯು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿದಂತೆ ಎಡಪಕ್ಷಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು​ ಪ್ರಕರಣ ಸಂಬಂಧ ಕಿಡಿಗೇಡಿಗಳ ಗುಂಪಿನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಇಲ್ಲಿಯವರೆಗೂ ಯಾರ ಬಂಧನವೂ ಆಗಿಲ್ಲ. ದಾಳಿಕೋರರ ಬೆಂಬಲಕ್ಕೆ ದೆಹಲಿ ಪೊಲೀಸರೇ ನಿಂತಿದ್ದಾರೆ ಎಂಬುದು ಪ್ರತಿಭಟನಾನಿರತ ವಿದ್ಯಾರ್ಥಿಗಳ ಆರೋಪ.

ಜೆಎನ್​​ಯು ಹಿಂಸಾಚಾರ ಪ್ರಕರಣ ಸಂಬಂಧಿಸಿದಂತೆ ಯಾವುದೇ ಮಹತ್ವದ ಸುಳಿವುಗಳು ಸಿಕ್ಕಿಲ್ಲ. ಅದಕ್ಕಾಗಿ ಶೋಧಕಾರ್ಯ ಮುಂದುವರೆದಿದೆ. ಪ್ರಕರಣದ ತನಿಖೆಯನ್ನು ಕ್ರೈಮ್ ಬ್ರಾಂಚ್’ಗೆ ಹಸ್ತಾಂತರಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ಧಾರೆ. ಈ ಮಧ್ಯೆಯೇ ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಪ್ರತಿಭಟನಾನಿರ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಏನಿದು ಘಟನೆ?: ಜೆಎನ್​​ಯು ಕ್ಯಾಂಪಸ್​​ನಲ್ಲಿ ಶಬರಮತಿ ಹಾಸ್ಟೆಲ್​​ ಬಳಿ ಐಶ್​ ಘೋಷ್​​​ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕಿಡಿಗೇಡಿಗಳ ಗುಂಪು ಹಲ್ಲೆ ನಡೆಸಿದ್ದಾರೆ ಎನ್ನುತ್ತಿವೆ ಮೂಲಗಳು. 50ಕ್ಕೂ ಹೆಚ್ಚು ಮಂದಿ ಗೂಂಡಾಗಳು ಗುಂಪು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದೆ. ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜೆಎನ್​​ಯು ವಿದ್ಯಾರ್ಥಿ ಸಂಘ, ಎಬಿವಿಪಿ ಕಾರ್ಯಕರ್ತರೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸಂಘದ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

Comments are closed.