ರಾಷ್ಟ್ರೀಯ

ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆ

Pinterest LinkedIn Tumblr

ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ದರ, ಎರಡನೇ ವಾರದ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿರುವುದು ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಮಲ್ಟಿ ಕಮೋಡಿಟಿ ಎಕ್ಸಚೇಂಜ್‌ನಲ್ಲಿ ಚಿನ್ನದ ಬೆಲೆಯಲ್ಲಿ ಶೇ,38ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ದೇಶೀಯ ಮಾರುಟ್ಟೆಯಲ್ಲಿ 39,680 ರೂ. ಆಗಿದೆ.

ಸತತ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ ಇದುವರೆಗೂ 1,600 ರೂ. ಇಳಿಕೆ ಕಂಡಿರುವುದು ವಿಶೇಷ.

ಇನ್ನು ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಶೇ.34ರಷ್ಟು ಇಳಿಕೆ ಕಂಡಿಬಂದಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ಇದೀಗ 46,419 ರೂ. ಆಗಿದೆ.

ಅದರಂತೆ ಇರಾನ್-ಅಮೆರಿಕ ನಡುವಿನ ಯುದ್ಧೋನ್ಮಾದದ ಹೊರತಾಗಿಯೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇ.05ರಷ್ಟು ಇಳಿಕೆ ಕಂಡುಬಂದಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,551 ಡಾಲರ್ ಆಗಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿನ ಇಳಿಕೆ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಚೈತನ್ಯ ತುಂಬಿರುವುದು ಸತ್ಯ.

Comments are closed.