ರಾಷ್ಟ್ರೀಯ

ಪಾಕ್ ನಿಂದ ಭಾರೀ ಶೆಲ್ ದಾಳಿ; ಸೇನಾಪಡೆಯ ಇಬ್ಬರು ಪೋರ್ಟರ್ಸ್ ಸಾವು

Pinterest LinkedIn Tumblr


ಶ್ರೀನಗರ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಪಡೆ ಅಪ್ರಚೋದಿತ ಮೋರ್ಟಾರ್ ಬಾಂಬ್ಸ್, ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ ಇಬ್ಬರು (ಪೋರ್ಟರ್ಸ್-ಕೂಲಿಯಾಳು) ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಪ್ರಾಥಮಿಕ ವರದಿ ಪ್ರಕಾರ, ಪಾಕಿಸ್ತಾನಿ ಪಡೆಗಳು ನಡೆಸಿದ ಭಾರೀ ಗುಂಡಿನ ಮತ್ತು ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಡಿನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯ ಇಬ್ಬರು ಕೂಲಿಗಳು ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಾಕ್ ಪಡೆ ನೇರವಾಗಿ ದಾಳಿ ನಡೆಸಿತ್ತು ಎಂದು ವರದಿ ತಿಳಿಸಿದೆ.

ಪೂಂಚ್ ಜಿಲ್ಲೆಯ ಗುಲ್ಪುರ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ಸಮೀಪ ಪಾಕಿಸ್ತಾನ ಪಡೆಗಳು ಇಂದು ಮುಂಜಾನೆಯಿಂದ ನಿರಂತರವಾಗಿ ಅಪ್ರಚೋದಿತ ಶೆಲ್, ಬಾಂಬ್ ದಾಳಿ ನಡೆಸಿರುವುದಾಗಿ ವರದಿ ಹೇಳಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಇಬ್ಬರು ಪೋರ್ಟರ್ ಗಳ ಶವವನ್ನು ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.