ರಾಷ್ಟ್ರೀಯ

ಸಮಾಜವಾದಿ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ

Pinterest LinkedIn Tumblr


ಲಕ್ನೋ: ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ನಲ್ಲಿ ಸಮಾಜವಾದಿ ಪಕ್ಷದ(ಎಸ್ ಪಿ) ಮುಖಂಡ ಬಿಜ್ಲಿ ಯಾದವ್(40) ಎಂಬವರನ್ನು ಅಪರಿಚಿತರು ಗುಂಡಿಕ್ಕಿ ಕೊಂಡಿರುವ ಘಟನೆ ನಡೆದಿದೆ.

ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ಬೆಳಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಿದರು. ಗುಂಡು ತಗುಲಿದ ಯಾದವ್ ಕುಸಿದುಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದರು.

ಸುದ್ದಿ ತಿಳಿದು ಸ್ಥಳದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯಾದವ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯಾದವ್ ಹತ್ಯೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದ್ದಾರೆ.

Comments are closed.