ರಾಷ್ಟ್ರೀಯ

ಬಾಲಕಿಯ ಅಪಹರಿಸಿ 36 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ!

Pinterest LinkedIn Tumblr


ಒಡಿಶಾ: 13 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ನಂತರ 36 ಗಂಟೆಗಳ ಕಾಲ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯ ಬೆಹ್ರಾಮ್ ಪುರ್ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 10ರಂದು 8ನೇ ತರಗತಿ ವಿದ್ಯಾರ್ಥಿನಿ ಸ್ಥಳೀಯ ಯುವಕ ದಾನಾರ್ ಬಳಿ ತೆರಳಿದ್ದಳು. ಆ ಸಂದರ್ಭದಲ್ಲಿ ಆತ ತನ್ನೊಂದಿಗೆ ಬರುವಂತೆ ಒತ್ತಾಯಿಸಿದ್ದ. ಈತ ಕಾಲೇಜಿಗೆ ಹೋಗುವ ವಿದ್ಯಾರ್ಥಿಯಾಗಿದ್ದು, ಆತನ ಪರಿಚಯ ಇತ್ತು. ಆದರೆ ಬಾಲಕಿ ಆತನ ಜತೆ ಹೋಗಲು ನಿರಾಕರಿಸಿದ್ದಳು ಎಂದು ವರದಿ ತಿಳಿಸಿದೆ.

ಆಕೆ ನಿರಾಕರಿಸಿದ ನಂತರ ದಾನಾರ್ ತನ್ನ ಇಬ್ಬರು ಗೆಳೆಯರನ್ನು ಕರೆಯಿಸಿಕೊಂಡು ಬಾಲಕಿಯನ್ನು ಅಪಹರಿಸಿ ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದರು. ಅವರು ಆಕೆಗೆ ಕುಡಿಯಲು ತಂಪು ಪಾನೀಯ ನೀಡಿದ್ದರು. ನಂತರ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಬೆಹ್ರಾಮ್ ಪುರ್ ಪೊಲೀಸ್ ವರಿಷ್ಠಾಧಿಕಾರಿ ಪಿನಾಲ್ ಮಿಶ್ರಾ ತಿಳಿಸಿದ್ದಾರೆ.

ಸುಮಾರು 36ಗಂಟೆಗಳ ಕಾಲ ಒತ್ತೆಯಾಳನ್ನಾಗಿ ಇರಿಸಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆರೋಪಿಗಳು ಮನೆ ಸಮೀಪ ಎಸೆದು ಹೋಗಿರುವುದಾಗಿ ಮಿಶ್ರಾ ವಿವರಿಸಿದ್ದಾರೆ.

ಆರೋಪಿಗಳ ವಿರುದ್ಧ ಪೋಸ್ಕೋ ಹಾಗೂ ಐಪಿಸಿ ಪ್ರಕಾರ ದೂರು ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದಾನಾರ್ ಸೇರಿದಂತೆ ಮೂವರನ್ನು ಬಂಧಿಸಬೇಕಾಗಿದೆ. ಸಂತ್ರಸ್ತೆಯ ವೈದ್ಯಕೀಯ ವರದಿ ಬಂದ ನಂತರ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.

Comments are closed.