ರಾಷ್ಟ್ರೀಯ

11ನೇ ತರಗತಿ ವಿದ್ಯಾರ್ಥಿನಿ ನವಜಾತ ಶಿಶುವಿಗೆ ಜನ್ಮ

Pinterest LinkedIn Tumblr


ನವದೆಹಲಿ: ಛತ್ತೀಸ್ಗಡದ ಶಾಲೆಯೊಂದರಿಂದ ಬೆಚ್ಚಿಬೀಳಿಸುವ ಪ್ರಕರಣ ಹೊರಬಂದಿದೆ. ಹೌದು, ಕೇವಲ 11 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯೋರ್ವಳು ನವಜಾತ ಶಿಶುವಿಗೆ ಜನ್ಮ ನೀಡಿದ್ದಾಳೆ. ದಂತೆವಾಡ ಕ್ಷೇತ್ರದ ಶಾಲೆಯೊಂದರಲ್ಲಿ ಈ ಘಟನೆ ವರದಿಯಾಗಿದೆ. ಕಳೆದ ಎರಡು ವರ್ಷಗಳಿಂದ ತಾನು ಓರ್ವ ಬಾಲಕನ ಜೋತೆ ರಿಲೇಶನ್ ಶಿಪ್ ನಲ್ಲಿದ್ದೆ ಎಂದು ಬಾಲಕಿ ಹೇಳಿದ್ದಾಳೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಈ ವಿದ್ಯಾರ್ಥಿನಿ ಶಾಲೆಯ ಹಾಸ್ಟೆಲ್ ನಲ್ಲಿ ವಾಸವಾಗಿದ್ದು, ಘಟನೆಯ ಬಳಿಕ ಹಾಸ್ಟೆಲ್ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿದೆ.

ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿ ಆಸ್ಪತ್ರೆಯಲ್ಲಿಯೇ ನವಜಾತ ಶಿಶುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಕೆಲವೇ ನಿಮಿಷಗಳಲ್ಲಿ ಶಿಶು ಮೃತಪಟ್ಟಿದೆ ಎಂದು ಅವರು ಹೇಳಿದ್ದಾರೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಸದ್ಯ ನವಜಾತ ಶಿಶುವಿನ ಮೃತ ದೇಹವನ್ನು ಬಾಲಕಿಯ ಪಾಲಕರಿಗೆ ಒಪ್ಪಿಸಲಾಗಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ಕೈಗೊಂಡ ಬಳಿಕವಷ್ಟೇ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೂ ಮೊದಲು ರಾಷ್ಟ್ರರಾಜಧಾನಿ ದೆಹಲಿ ಹಾಗೂ ಮಧ್ಯಪ್ರದೇಶಗಳಲ್ಲಿಯೂ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ವಿವಿಧ ಕಡೆಗಳಿಂದ ಪಟ್ಟಣಕ್ಕೆ ವಿದ್ಯಾಭಾಸಕ್ಕೆ ಬರುವ ಅಥವಾ ಕೆಲಸ ಆರಿಸಿ ಬರುವ ಯುವತಿಯರ ಜೀವನ ಸೇಫ್ ಆಗಿದೆಯೇ? ಎಂಬ ಪ್ರಶ್ನೆಗಳು ಇದೀಗ ಏಳಲಾರಂಭಿಸಿವೆ. ದೆಹಲಿಯಲ್ಲಿ ನಡೆದ ಇಂತಹುದೇ ಒಂದು ಪ್ರಕರಣದಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ನವಜಾತ ಶಿಶುವಿಗೆ ಜನ್ಮ ನೀಡಿದ್ದಳು ಎಂಬುದು ಇಲ್ಲಿ ಉಲ್ಲೇಖನೀಯ.

ಹಾಸ್ಟೆಲ್ ಗಳಲ್ಲಿ ವಾಸಿಸುವ ವಿದ್ಯಾರ್ಥಿನಿಯರ ಸುರಕ್ಷತೆಯ ಕುರಿತು ಶಾಲಾ ಆಡಳಿತ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ಚತ್ತೀಸ್ಗಡ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ನೀಡಿರುವ ಹೇಳಿಕೆಯನ್ನು ಆಧರಿಸಿ ಬಾಲಕನ ಪತ್ತೆಗೆ ಬಲೆ ಬೀಸಲಾಗಿದ್ದು, ಆತನನ್ನು ಬಂಧಿಸಿದ ಬಳಿಕ ಆತನ ವಿರುದ್ಧ ಉಚಿತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Comments are closed.