ಲಕ್ನೋ: ಮದುವೆಯಾದ ಮರುದಿನವೇ ವಧುವನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ವರದಿಯಾಗಿದೆ.
ಕಳೆದ ಶುಕ್ರವಾರ ಆಕೆಯ ವಿವಾಹ ಸಮಾರಂಭ ನಡೆದಿತ್ತು. ಅದರ ಮರುದಿನ ಅಂದರೆ ಶನಿವಾರ ಬೆಳಿಗ್ಗೆ ಆಕೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ. ಭಾನುವಾರ ಆಕೆ ಹಾಪುರದ ಬ್ಯಾಂಕ್ ಒಂದರ ಬಳಿ ಪತ್ತೆಯಾಗಿದ್ದಾಳೆ.
ಇಬ್ಬರು ಯುವಕರು ಆಕೆಯನ್ನು ಅಪಹರಿಸಿ, ಸಾಮೂಹಿಕವಾಗಿ ಅತ್ಯಾಚಾರಗೈದಿದ್ದಾರೆ ಎಂದು ವರದಿಯಾಗಿದೆ. ಆಕೆ ನಾಪತ್ತೆಯಾದ ಕೂಡಲೇ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಕೆಯನ್ನು ಬ್ಯಾಂಕ್ ಬಳಿ ಪತ್ತೆ ಮಾಡಿದ್ದಾರೆ. ಆಕೆ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಕೆ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ಹಾಗಾಗಿ ಕುಟುಂಬಿಕರ ದೂರಿನ ಮೇರೆಗೆ ತನಿಖೆ ನಡೆಸುತ್ತೆವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Comments are closed.