ರಾಷ್ಟ್ರೀಯ

ದೇಶದಿಂದ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಓಡಿಸಲಾಗುವುದು: ಬಂಗಾಳ ಘಟಕದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್

Pinterest LinkedIn Tumblr


ಕೋಲ್ಕತ್ತಾ: ಅಗತ್ಯಬಿದ್ದರೆ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ದೇಶದಿಂದ ಓಡಿಸಲಾಗುವುದು ಎಂದು ಪಶ್ಚಿಮ ಬಂಗಾಳ ಘಟಕದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿಕೆ ನೀಡಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ದಿಲೀಪ್ ಘೋಷ್ ಅವರು ಈಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಪರವಾದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡುತ್ತಾ ಅವರು, 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಲಾಗುವುದು. ಅಗತ್ಯ ಬಿದ್ದರೆ ಅವರನ್ನು ದೇಶದಿಂದ ಓಡಿಸಲಾಗುವುದು. ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು. ಆಗ ಮಮತಾ ಬ್ಯಾನರ್ಜಿಯವರು ಯಾರೊಬ್ಬರನ್ನು ಸಮಾಧಾನ ಪಡಿಸಲು ಸಾಧ್ಯವಿಲ್ಲ ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಾ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವವರನ್ನು ನಾಯಿಗಳಂತೆ ಸುಟ್ಟು ಹಾಕಬೇಕು ಎಂದಿರುವ ಅವರು, ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸರಕಾರಗಳು ಇಂತಹ ರಾಷ್ಟ್ರ ವಿರೋಧಿಗಳ ಮೇಲೆ ಗುಂಡು ಹಾರಿಸಿ ಸರಿಯಾದ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

Comments are closed.