ರಾಷ್ಟ್ರೀಯ

ಆಂಧ್ರಕ್ಕೆ ಮೂರು ರಾಜಧಾನಿ; ಭುಗಿಲೆದ್ದ ಪ್ರತಿಭಟನೆ

Pinterest LinkedIn Tumblr


ಹೈದರಾಬಾದ್: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಯನ್ನಾಗಿಸುವ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆಯನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಅಮರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಮತ್ತು ಗಲ್ಲಾ ನಡುವೆ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಗಲ್ಲಾ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದಾಗಿ ವರದಿ ವಿವರಿಸಿದೆ.

ಸೋಮವಾರ ಮಧ್ಯರಾತ್ರಿ ಜಯದೇವ್ ಗಲ್ಲಾ ಅವರನ್ನು ಮಂಗಳಾಗಿರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಜನವರಿ 31ವರೆಗೆ ಕಸ್ಟಡಿಗೆ ಒಪ್ಪಿಸಿರುವುದಾಗಿ ವರದಿ ತಿಳಿಸಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆಯನ್ನು ಪಾಸ್ ಮಾಡಿರುವುದನ್ನು ವಿರೋಧಿಸಿ ಆಂಧ್ರಪ್ರದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಆಂಧ್ರಪ್ರದೇಶ ಮೂರು ಭಾಗ ಮಾಡಿ ಮೂರು ರಾಜಧಾನಿ ನಿರ್ಮಾಣ ಮಾಡುವುದರಿಂದ ಮುಂದಿನ ಪೀಳಿಗೆಗೆ ಹೊರೆಯಾಗಲಿದೆ. ಆರ್ಥಿಕ ಹೊರೆ ಭರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ತಾನು ಹೋರಾಟ ಮಾಡುತ್ತಿರುವುದಾಗಿ ಸಂಸದ ಜಯದೇವ್ ಗಲ್ಲಾ ತಿಳಿಸಿರುವುದಾಗಿ ವರದಿ ಹೇಳಿದೆ.

Comments are closed.