ರಾಷ್ಟ್ರೀಯ

ನಿರ್ಭಯಾ ಹಂತಕರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

Pinterest LinkedIn Tumblr


ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವವರು ಶಿಕ್ಷೆಯನ್ನು ಮುಂದೂಡಲು ಮಾಡುತ್ತಿರುವ ಪ್ರಯತ್ನಗಳೆಲ್ಲವೂ ವಿಫಲವಾಗುತ್ತಿವೆ.

ನಾಲ್ವರ ಪೈಕಿ ಇಬ್ಬರು ಶುಕ್ರವಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ತಿಹಾರ್‌ ಜೈಲಧಿಕಾರಿಗಳು ಕೆಲವು ದಾಖಲೆಗಳನ್ನು ನೀಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಅಕ್ಷಯ್‌ ಕುಮಾರ್‌ ಸಿಂಗ್‌ (31), ಪವನ್‌ ಸಿಂಗ್‌ (25) ದಿಲ್ಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿದೆ.

ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಜಯ್‌ ಕುಮಾರ್‌ ಜೈನ್‌, ತಿಹಾರ್‌ ಜೈಲಧಿಕಾರಿಗಳಿಂದ ದಾಖಲೆ ಪಡೆಯಬಹುದು ಎಂದು ತಿಳಿಸಿದ್ದರು.

ಈ ಸಂದರ್ಭದಲ್ಲಿ ವಾದ ಮಂಡಿಸಿದ ಪ್ರಾಸಿಕ್ಯೂಟರ್‌, ಅಧಿಕಾರಿಗಳು ಈಗಾಗಲೇ ಬಹುತೇಕ ಎಲ್ಲ ದಾಖಲೆಗಳನ್ನು ನೀಡಿದ್ದಾರೆ ಎಂದು ಅಫಿಡವಿಟ್‌ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಗಲ್ಲು ಶಿಕ್ಷೆಯನ್ನು ಮುಂದೂಡಲು ಅಪರಾಧಿಗಳು ಎಲ್ಲ ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಾದಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿದರು.

ಇತ್ತೀಚೆಗೆ ವಿನಯ್‌ ಕುಮಾರ್‌ ಶರ್ಮ (26) ಮತ್ತು ಮುಕೇಶ್ ಸಿಂಗ್‌ (32) ಕಳೆದವಾರ ಸಲ್ಲಿಸಿದ್ದ ಕ್ಯುರೇಟಿವ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕೇಂದ್ರ ಸರಕಾರ, ಡೆತ್‌ ವಾರಂಟ್‌ ನಂತರ ಏಳು ದಿನಗಳ ಕಾಲ ಮಾತ್ರ ಅವಕಾಶ ನೀಡಬೇಕೆಂದು ಮನವಿ ಮಾಡಿತ್ತು.

Comments are closed.