ರಾಷ್ಟ್ರೀಯ

ಪ್ರೇಯಸಿಯೊಂದಿಗೆ ಸೆಕ್ಸ್ ಮಾಡೋವಾಗ ಶಬ್ದ ಮಾಡಿ ಸಿಕ್ಕಿಬಿದ್ದ!

Pinterest LinkedIn Tumblr


ಲಕ್ನೋ: ಮಗಳೊಂದಿಗೆ ಸೆಕ್ಸ್ ಮಾಡುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪ್ರಿಯತಮನನ್ನು ಮಾವನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಏನಿದು ಪ್ರಕರಣ?
21 ವರ್ಷದ ಯುವಕ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು. ಅದೇ ಗ್ರಾಮದ ತನ್ನ ಮಾವನ ಮಗಳನ್ನು ಪ್ರೀತಿಸುತ್ತಿದ್ದನು. ಕಳೆದ 2 ದಿನಗಳ ಹಿಂದೆ ರಾತ್ರಿ ತನ್ನ ಪ್ರೇಯಸಿಯ ಮನೆಗೆ ಕದ್ದುಮುಚ್ಚಿ ಹೋಗಿದ್ದಾನೆ. ಅಲ್ಲಿ ಆಕೆಯೊಂದಿಗೆ ರೂಮಿನಲ್ಲಿ ಮಾತನಾಡುತ್ತಾ ಕುಳಿತಿದ್ದ. ಆ ನಂತರ ಯುವತಿಯೊಂದಿಗೆ ಸೆಕ್ಸ್ ಮಾಡಲು ಶುರು ಮಾಡಿದ್ದಾನೆ.

ರೂಮಿನಲ್ಲಿ ಶಬ್ದವಾಗುತ್ತಿದ್ದ ಕಾರಣ ಯುವತಿಯ ತಂದೆ ರೂಮಿಗೆ ಬಂದಿದ್ದಾರೆ. ಈ ವೇಳೆ ಇಬ್ಬರೂ ಸೆಕ್ಸ್ ಮಾಡುತ್ತಿರುವುದನ್ನು ನೋಡಿ ತಂದೆ ಕೋಪಗೊಂಡಿದ್ದನು. ಕೂಡಲೇ ಯುವತಿಯ ತಂದೆ ಮತ್ತು ಸಹೋದರ ಸೇರಿಕೊಂಡು ಯುವಕನ ಮೇಲೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ರೈಲ್ವೆ ಹಳಿ ಮೇಲೆ ಬಿಸಾಡಿದ್ದಾರೆ.

ಇತ್ತ ಮಗ ರಾತ್ರಿಯಿಂದ ಕಾಣೆಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಆಗ ರೈಲ್ವೆ ಹಳಿ ಪಕ್ಕದ ಜಮೀನಿನಲ್ಲಿ ಯುವಕ ಮೃತದೇಹ ಪತ್ತೆಯಾಗಿದೆ. ತಕ್ಷಣ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರು ಯುವಕನ ಫೋನ್ ಕಾಲ್ ರೆಕಾರ್ಡ್ ಪರಿಶೀಲನೆ ಮಾಡಿದ್ದಾರೆ. ಆಗ ಯುವತಿಯನ್ನು ಪ್ರೀತಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನ ಮೇರೆಗೆ ಯುವತಿಯನ್ನು ಪ್ರಶ್ನಿಸಿದಾಗ, ತನ್ನ ತಂದೆ ಮತ್ತು ಸಹೋದರ ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾಳೆ.

ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಇತ್ತ ಮಗನನ್ನ ಕಳೆದುಕೊಂಡಿರುವ ಪೋಷಕರು ನಮ್ಮ ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸುತ್ತಿದ್ದಾರೆ.

Comments are closed.