ರಾಷ್ಟ್ರೀಯ

ನಿರ್ಭಯಾ ಪ್ರಕರಣದ ಅಪರಾಧಿ ತಂದೆಯ ಅರ್ಜಿ ವಜಾಗೊಳಿಸಿದ ಕೋರ್ಟ್

Pinterest LinkedIn Tumblr


ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ನೀಡಲಾಗಿರುವ ಮರಣದಂಡನೆ ಶಿಕ್ಷೆಯನ್ನು ಪುನರ್ ಪರಿಶೀಲಿಸಬೇಕೆಂದು ಅಪರಾಧಿ ಪವನ್ ಗುಪ್ತಾ ತಂದೆ ಸಲ್ಲಿಸಿದ್ದ ಮೇಲ್ಮನವಿಯನ್ನು ದಿಲ್ಲಿ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅಪರಾಧಿಯ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಲಿ, ಈ ಮೂಲಕ ಮರಣದಂಡನೆ ಶಿಕ್ಷೆಯನ್ನು ವಿಳಂಬವಾಗಿಸುವ ಯತ್ನ ವಿಫಲವಾಗಲಿದೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಸೋಮವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದರು.

ಏತನ್ಮಧ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಮುಕೇಶ್ ಕುಮಾರ್ ಸಿಂಗ್, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೂಡಲೇ ವಿಚಾರಣೆ ನಡೆಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದ.

ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಒಳಗಾಗಿದ್ದ ಮುಕೇಶ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 17ರಂದು ವಜಾಗೊಳಿಸಿದ್ದರು.

Comments are closed.