ರಾಷ್ಟ್ರೀಯ

ಪಕ್ಕದ ರೂಮಿನಲ್ಲಿ ಗಂಡ- ಮಹಿಳೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ

Pinterest LinkedIn Tumblr


ಹೈದರಾಬಾದ್: 36 ವರ್ಷದ ಮಹಿಳೆಯನ್ನು ಮನೆಯಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಖಮ್ಮಂ ಬಳಿಯ ಗ್ರಾಮವೊಂದರಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ವ್ಯಕ್ತಿಗಳಿಬ್ಬರು ಮಹಿಳೆಯ ಮನೆಗೆ ತೆರಳಿ ಬೆದರಿಕೆ ಹಾಕಿ, ಹತ್ತಿರದ ಹತ್ತಿ ಹೊಲಕ್ಕೆ ಎಳೆದುಕೊಂಡು ಹೋಗಿದ್ದಾರೆ. ಮಹಿಳೆಯನ್ನು ಅಪಹರಣ ಮಾಡುವ ವೇಳೆ ಪತಿ ಪಕ್ಕದ ರೂಮಿನಲ್ಲಿ ಮಲಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತ ಮಹಿಳೆಯನ್ನು ಹತ್ತಿ ಹೊಲಕ್ಕೆ ಕರೆದುಕೊಂಡು ಹೋಗುವ ಮೊದಲೇ ಅಲ್ಲಿ ಐವರು ಪುರುಷರು ಕಾಯುತ್ತಿದ್ದರು. ಮಹಿಳೆಯನ್ನು ಕರೆದುಕೊಂಡು ಹೋದ ತಕ್ಷಣ ಮೂವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆದರೆ ಪೊಲೀಸ್ ಗಸ್ತು ವಾಹನ ಸಮೀಪಿಸುತ್ತಿರುವುದನ್ನು ನೋಡಿ ಗ್ಯಾಂಗ್ ಪರಾರಿಯಾಗಿದೆ.

ಸದ್ಯಕ್ಕೆ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಹಿಳೆ ಮತ್ತು ಆರೋಪಿಗಳು ಒಂದೇ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.