ರಾಷ್ಟ್ರೀಯ

ಪ್ರಚೋದನಾಕಾರಿ ಭಾಷಣ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರ ಶರ್ಜಿಲ್ ಇಮಾನ್ ಬಂಧನ

Pinterest LinkedIn Tumblr

ಪಾಟ್ನಾ (ಬಿಹಾರ): ದೇಶದ್ರೋಹ ಪ್ರಕರಣದ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರ ಹಾಗೂ ಜೆಎನ್​ಯು ಮಾಜಿ ವಿದ್ಯಾರ್ಥಿ ಶರ್ಜಿಲ್ ಇಮಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹಾಗೂ ಹೋರಾಟಗಾರ ಶರ್ಜಿಲ್ ಇಮಾಮ್ ಅವರನ್ನು ಪಾಟ್ನಾದಲ್ಲಿ ಇಂದು ವಶಕ್ಕೆ ಪಡೆಯಲಾಗಿದೆ. ಬಿಹಾರ ರಾಜ್ಯದ ಪಾಟ್ನಾದಲ್ಲಿರುವ ಶರ್ಜಿಲ್ ಅವರ ನಿವಾಸದ ಮೇಲೆ ಸ್ಥಳೀಯ ಪೊಲೀಸರ ಜೊತೆಗೂಡಿ ಕೇಂದ್ರೀಯ ಅಧಿಕಾರಿಗಳು ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್​ಸಿ ವಿರೋಧಿರುವ ಭರದಲ್ಲಿ ಇಮಾಮ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಡಿ.13 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಇದೇ ರೀತಿ ಉದ್ರಿಕ್ತ ಭಾಷಣ ಮಾಡಿದ್ದರು ಎಂದು ಹೇಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಿದ್ದಾರೆ. ಇದಷ್ಟೇ ಅಲ್ಲದೆ, ಉತ್ತರಪ್ರದೇಶ ಹಾಗೂ ಅಸ್ಸಾಂನಲ್ಲಿಯೂ ಇಮಾಮ್ ವಿರುದ್ಧ ಪ್ರಕರಣ ದಾಖಲಾಗಿದೆ.

Comments are closed.