ರಾಷ್ಟ್ರೀಯ

ಕ್ಷಮಾದಾನ ಅರ್ಜಿ ವಜಾ; ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ

Pinterest LinkedIn Tumblr

ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾಗಿದ್ದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಳ್ಳಿಹಾಕಿದೆ.

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬ ಮುಕೇಶ್ ಕುಮಾರ್ ಸಿಂಗ್ ರಾಷ್ಟ್ರಪತಿಗಳು ತಿರಸ್ಕರಿಸಿದ್ದ ಕ್ಷಮಾದಾನ ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. ಅದನ್ನು ಇಂದು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ನ್ಯಾಯಾಧೀಶೆ ಆರ್ ಭಾನುಮತಿ ಅವರ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಿ ಅರ್ಜಿ ತಿರಸ್ಕರಿಸುವುದರ ಅರ್ಥ ಅವರು ಅರ್ಜಿಯ ಬಗ್ಗೆ ಗಮನ ಹರಿಸಲಿಲ್ಲ ಎಂದರ್ಥವಲ್ಲ. ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳೆಲ್ಲ ನೀಡಿರುವ ತೀರ್ಪಿನ ವಿಷಯಗಳೆಲ್ಲವನ್ನೂ ರಾಷ್ಟ್ರಪತಿಗಳ ಮುಂದಿಡಲಾಗಿತ್ತು ಎಂದು ಹೇಳಿದೆ.

ಜೈಲಿನಲ್ಲಿ ನೋವು ಅನುಭವಿಸಬೇಕಾಗುತ್ತದೆ ಎನ್ನುವುದು ಕ್ಷಮಾದಾನ ಅರ್ಜಿಯ ತಿರಸ್ಕಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ಕಾರಣವಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.

ನಾಲ್ವರು ಅಪರಾಧಿಗಳಾದ ಅಕ್ಷಯ್, ಮುಖೇಶ್ ಸಿಂಗ್ , ವಿನಯ್ ಶರ್ಮಾ ಮತ್ತು ಪವನ್ ಗುಪ್ತಾ ಅವರುಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವ ಸಮಯ ನಿಗದಿಯಾಗಿದೆ.

Comments are closed.