
ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಫೈರಿಂಗ್ ನಡೆದಿದೆ. ಪ್ರತಿಭಟನಾಕಾರರ ವಿರುದ್ಧ ವ್ಯಕ್ತಿಯೋರ್ವ ಪೈರಿಂಗ್ ನಡೆಸಿದ್ದು, ಈ ವೇಳೆ ಓರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳು ವಿದ್ಯಾರ್ಥಿ ಶಬಾದ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಫೈರಿಂಗ್ ಮಾಡಿದ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ದುಷ್ಕರ್ಮಿಯು ಆಜಾದಿಯನ್ನು ತೆಗೆದುಕೊಳ್ಳಿ ಹಿಂದೂಸ್ಥಾನ್ ಜಿಂದಾಬಾದ್ , ದಿಲ್ಲಿ ಪೊಲೀಸ್ ಜಿಂದಾಬಾದ್ ಎಂದು ಕೂಗಿದ್ದಾನೆ.
ಪೌರತ್ವ ವಿರೋಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಇತರ ಜನ ರಾಜ್ ಘಾಟ್ ಕಡೆಗೆ ಮೆರವಣಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಈ ಹಿಂದೆ ಡಿಸೆಂಬರ್ 15 ರಂದು ಇಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಗಳಿಗೆ ಸಂಭಂಧಿಸಿದಂತೆ 70 ಜನ ಶಂಕಿತರ ಫೊಟೋಗಳನ್ನು ದೆಹಲಿ ಪೊಲೀಸರು ಗುರುವಾರ ಬಿಡುಗಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 17ರಂದು 10 ಜನರನ್ನು ಬಂಧಿಸಲಾಗಿತ್ತು. ಮತ್ತು ಇವರಲ್ಲಿ ಯಾರೊಬ್ಬರೂ ಜಾಮಿಯಾ ಮಿಲಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೇ ಅಲ್ಲ ಎಂದು ಹೇಳಲಾಗಿತ್ತು.
Comments are closed.