ರಾಷ್ಟ್ರೀಯ

ವೋಡ್ಕಾ ಕುಡಿಸಿದ ಇನ್‍ಸ್ಟಾಗ್ರಾಂ ಮೂಲಕ ಪರಿಯಚನಾಗಿದ್ದ ಗೆಳೆಯ – ಎಚ್ಚರವಾಗಿ ಆಸ್ಪತ್ರೆಗೆ ಹೋದ ವಿದ್ಯಾರ್ಥಿನಿ

Pinterest LinkedIn Tumblr


ಲಕ್ನೋ: ಇನ್‍ಸ್ಟಾಗ್ರಾಂ ಮೂಲಕ ಪರಿಯಚನಾಗಿದ್ದ ಸ್ನೇಹಿತನೊಬ್ಬ ಗೆಳೆತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರದ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಹತ್ರಾಸ್ ಜಿಲ್ಲೆಯವನಾದ ದರ್ಶ್ ಗೌತಮ್ (23) ಬಂಧಿತ ಆರೋಪಿ. ಈಗ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದು, ತನ್ನ ಪೋಷಕರೊಂದಿಗೆ ಸದರ್ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಆದರೆ ತಾಜ್‍ಗಂಜ್ ಪ್ರದೇಶದ ಹೋಟೆಲ್‍ವೊಂದರಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ವೋಡ್ಕಾ ಕುಡಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಗೌತಮ್ ಒಂದು ತಿಂಗಳ ಹಿಂದೆ ಇನ್‍ಸ್ಟಾಗ್ರಾಂ ಮೂಲಕ ಪರಿಚಯನಾಗಿದ್ದ. ಆದರೆ ತಾಜ್‍ಗಂಜ್ ಪ್ರದೇಶದ ಹೋಟೆಲಿನಲ್ಲಿ ಗೌತಮ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಸಂತ್ರಸ್ತೆ ನೀಡಿದ ದೂರಿ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಶುರು ಮಾಡಿದ್ದರು. ಆಗ ಹೋಟೆಲ್ ಸಿಸಿಟಿವಿಯಲ್ಲಿ ಸಂತ್ರಸ್ತೆ ಮತ್ತು ಆರೋಪಿ ಹೋಗಿರುವುದು ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬಬ್ಲೂ ಕುಮಾರ್ ತಿಳಿಸಿದ್ದಾರೆ.

ಇಬ್ಬರೂ ತಾಜ್‍ಗಂಜ್ ಪ್ರದೇಶದ ಹೋಟೆಲ್‍ಗೆ ಹೋಗಿದ್ದರು. ಅಲ್ಲಿ ಆರೋಪಿ ಸಂತ್ರಸ್ತೆಗೆ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಅದನ್ನು ಕುಡಿದ ನಂತರ ಆಕೆ ಪ್ರಜ್ಞೆ ತಪ್ಪಿದ್ದಾಳೆ. ಆಗ ಆರೋಪಿ ಗೌತಮ್ ಅತ್ಯಾಚಾರ ಎಸಗಿದ್ದಾನೆ. ಒಂದು ಗಂಟೆಯ ನಂತರ ಸಂತ್ರಸ್ತೆಗೆ ಎಚ್ಚರವಾಗಿದೆ. ಆಗ ಆಕೆಯ ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ತಕ್ಷಣ ಸಂತ್ರಸ್ತೆ ಸ್ನೇಹಿತರ ಜೊತೆ ಖಾಸಗಿ ಆಸ್ಪತ್ರೆಗೆ ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾಳೆ.

ಇತ್ತ ಆರೋಪಿ ತನ್ನ ಸ್ನೇಹಿತರ ಜೊತೆ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದನು. ಅಲ್ಲಿಯೇ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಸ್ನೇಹಿತರು ಮತ್ತು ಹೋಟೆಲ್ ಸಿಬ್ಬಂದಿಯ ಹೇಳಿಕೆಯ ಮೇರೆಗೆ ಆರೋಪಿಯನ್ನು ಬಂಧಿಸಿದ್ದೇವೆ. ವಿಚಾರಣೆ ವೇಳೆ ಆರೋಪಿ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದೇವೆ ಎಂದು ಬಬ್ಲೂ ಕುಮಾರ್ ಹೇಳಿದ್ದಾರೆ.

ಸಂತ್ರಸ್ತೆಯ ಖಾಸಗಿ ಭಾಗದಲ್ಲಿ ಆಗಿರುವ ಗಾಯದಿಂದ ಆಕೆಯ ಮೇಲೆ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ವೈದ್ಯಕೀಯ ವರದಿಯಲ್ಲಿ ತಿಳಿದುಬಂದಿದೆ. ಅತ್ಯಾಚಾರ ಎಸಗುವ ಮೊದಲು ಸಂತ್ರಸ್ತೆಗೆ ಜ್ಯೂಸಿನಲ್ಲಿ ವೋಡ್ಕಾವನ್ನು ಮಿಕ್ಸ್ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Comments are closed.