ರಾಷ್ಟ್ರೀಯ

ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧ

Pinterest LinkedIn Tumblr


ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್​ ಬಾಗ್​ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವವರ ಜತೆ ಮಾತುಕತೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್​ ಪ್ರಸಾದ್​ ಟ್ವೀಟ್​ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್​ನಲ್ಲಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, ಶಹೀನ್​ಬಾಗ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಜತೆಗೆ ಮಾತುಕತೆ ನಡೆಸಲು ಸಿದ್ಧವಾಗಿದೆ. ಅವರು ಸಿಎಎ ಬಗ್ಗೆ ಏನೇ ಅನುಮಾನವಿದ್ದರೂ ನಮ್ಮ ಬಳಿಯೇ ಕೇಳಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಓಖ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶಾಹೀನ್​ಬಾಗ್​​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್​ಆರ್​ಸಿ ವಿರೋಧಿಸಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಲೇ ಇದೆ.

ಈ ಮಧ್ಯೆ ಚುನಾವಣೆ ಹತ್ತಿರುವ ಬರುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ಶಾಹೀನ್​ ಬಾಗ್ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆಮ್​ ಆದ್ಮಿ ಪಕ್ಷ ಆರೋಪ ಮಾಡಿತ್ತು. ಆದರೆ ಇದೊಂದು ಅವಿವೇಕಯುತ ಆರೋಪ ಎಂದು ದೆಹಲಿ ಬಿಜೆಪಿಯ ಮಾಧ್ಯಮಗಳ ಚುನಾವಣೆಯ ಉಸ್ತುವಾರಿ ಅಶೋಕ್ ಗೋಯಲ್ ಹೇಳಿದ್ದಾರೆ.

Comments are closed.