ರಾಷ್ಟ್ರೀಯ

ದಿಲ್ಲಿ ವಿಧಾನಸಭಾ ಚುನಾವಣೆ; ಆಮ್ ಆದ್ಮಿ ಪಕ್ಷಕ್ಕೆ 60 ಸ್ಥಾನ!

Pinterest LinkedIn Tumblr


ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 54ರಿಂದ 60 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ ಎಂದು ಟೈಮ್ಸ್ ನೌ ಬಿಡುಗಡೆ ಮಾಡಿರುವ ಸಮೀಕ್ಷೆಯಲ್ಲಿ ತಿಳಿಸಿದೆ.

70 ಸದಸ್ಯ ಬಲ ಹೊಂದಿರುವ ದಿಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 10ರಿಂದ 14 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಷ್ಟೇ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ವಿವರಿಸಿದೆ.

ಕುತೂಹಲದ ವಿಷಯ ಏನೆಂದರೆ ಒಂದು ವೇಳೆ ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ದಿಲ್ಲಿಯಲ್ಲಿ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಸಮೀಕ್ಷೆ ತಿಳಿಸಿದೆ. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಏಳು ಸ್ಥಾನಗಳಲ್ಲಿ ಗೆಲುವಿನ ನಗು ಬೀರಿತ್ತು.

ಈ ಬಾರಿ ಚುನಾವಣೆಯಲ್ಲಿ ಆಪ್ ಶೇ.52ರಷ್ಟು ಮತ ಪಡೆಯಲಿದ್ದು, ಭಾರತೀಯ ಜನತಾ ಪಕ್ಷ ಶೇ.34ರಷ್ಟು ಮತ ಹಂಚಿಕೊಳ್ಳಲಿದೆ. ಮತ ಹಂಚಿಕೆ ಪ್ರಮಾಣ 2015ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಸಣ್ಣ ಪ್ರಮಾಣದ ಬದಲಾವಣೆಯಾಗಲಿದೆ. ಆಮ್ ಆದ್ಮಿ ಪಕ್ಷ ಶೇ.2.5ರಷ್ಟು ಮತದಾರರನ್ನು ಕಳೆದುಕೊಳ್ಳಲಿದ್ದು, ಬಿಜೆಪಿ ಶೇ.1.7ರಷ್ಟು ಮತಗಳಿಕೆ ಪ್ರಮಾಣ ಹೆಚ್ಚಾಗಲಿದೆ ಎಂದು ವಿವರಿಸಿದೆ.

Comments are closed.