ರಾಷ್ಟ್ರೀಯ

ಫೆ.16ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೇಜ್ರಿವಾಲ್; ಸಮಾರಂಭಕ್ಕೆ ಮೋದಿಗೆ ಆಹ್ವಾನ

Pinterest LinkedIn Tumblr

ನವದೆಹಲಿ: ಭಾರೀ ವಿಜಯದೊಂದಿಗೆ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್, ಈ ತಿಂಗಳ 16 ರಂದು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಜ್ಯಪಾಲ ಅನಿಲ್ ಬೈಜಾಲ್ ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಿಶೇಷ ಆಹ್ವಾನ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ನಡುವೆ ಕೇಜ್ರಿವಾಲ್ ಅವರು 11.30ಕ್ಕೆ ದೆಹಲಿ ರಾಜ್ಯಪಾಲ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.

Comments are closed.