ರಾಷ್ಟ್ರೀಯ

ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ನಿಲ್ಲಿಸಲು ಕಾರಣ ಕೇಳಿದ ಸುಪ್ರೀಂ ಕೋರ್ಟ್

Pinterest LinkedIn Tumblr

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ನಿಲ್ಲಿಸಲು ಏನು ಕಾರಣಗಳು ಎಂದು ತಮ್ಮ ವೆಬ್ ಸೈಟ್ ಗಳನ್ನು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ರಾಜಕೀಯ ಪಕ್ಷಗಳಿಗೆ ಆದೇಶ ನೀಡಿದೆ.

ರಾಜಕೀಯ ಪಕ್ಷಗಳು ಅಪರಾಧ ಹಿನ್ನಲೆಯುಳ್ಳ ಅಭ್ಯರ್ಥಿಗಳ ಪರಿಚಯ, ಸಾಧನೆಗಳು, ಅವರ ಪೂರ್ವಾಪರ ಮಾಹಿತಿಗಳು, ಅಪರಾಧ ಹಿನ್ನಲೆ ಪ್ರಕರಣಗಳ ಕುರಿತು ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ವೆಬ್ ಸೈಟ್ ನಲ್ಲಿ ನೀಡುವ ಮೂಲಕ ಮತದಾರರಿಗೆ ಅವರ ಬಗ್ಗೆ ಸಂಪೂರ್ಣ ವಿಷಯ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದಿನ ತೀರ್ಪಿನಲ್ಲಿ ಹೇಳಿದೆ.

ನ್ಯಾಯಾಲಯದ ಆದೇಶವನ್ನು ಪಾಲಿಸದಿದ್ದರೆ ರಾಜಕೀಯ ಪಕ್ಷಗಳು ನ್ಯಾಯಾಂಗ ನಿಂದನೆ ಆರೋಪ ಎದುರಿಸಬೇಕಾಗುತ್ತದೆ.ಆದೇಶವನ್ನು ಪಾಲಿಸದ ರಾಜಕೀಯ ಪಕ್ಷಗಳ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಹೇಳಿದೆ.

Comments are closed.