ರಾಷ್ಟ್ರೀಯ

ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ

Pinterest LinkedIn Tumblr


ಹೊಸದಿಲ್ಲಿ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು (ಭಾನುವಾರ) ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಹಾಲಿ ಇರುವ ಆರುವ ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಹಿಂದಿನ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.

ಕೈಲಾಶ್ ಗೆಹ್ಲೋಟ್, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಇಮ್ರಾನ್ ಹುಸೇನ್, ರಾಜೇಂದ್ರ ಪಾಲ್ ಗೌತಮ್ ಅವರು ಕೇಜ್ರಿವಾಲ್ ಸರಕಾರದಲ್ಲಿ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ನಾನು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಇದು ನಿಮ್ಮೆಲ್ಲರ ಜಯ ಎಂದರು

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಕ್ಷೇತ್ರಗಳನ್ನು ಗೆದ್ದಿದ್ದರೆ, ಬಿಜೆಪಿ 8 ಸ್ಥಾನ ಜಯಿಸಿತ್ತು.

Comments are closed.