ರಾಷ್ಟ್ರೀಯ

ಕಾಂಗ್ರೆಸ್ ನಿಂದ ಜ್ಯೋತಿರಾಧಿತ್ಯ ಸಿಂಧಿಯಾ ಆಗಮನದಿಂದ ಪಕ್ಷಕ್ಕೆ ಬಲ ಬಂದಿದೆ: ಅಮಿತ್ ಶಾ

Pinterest LinkedIn Tumblr


ನವದೆಹಲಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾಧಿತ್ಯ ಸಿಂಧಿಯಾ, ಇಂದು ಹಲವು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸರಿಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಸಿಂಧಿಯಾ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳು ತೀವ್ರ ಸಂತಸವೆನಿಸುತ್ತದೆ. ಅವರ ಆಗಮನದಿಂದ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಸಿಂಧಿಯಾ ಮಹತ್ವದ ಮಾತುಕತೆ ನಡೆಸಿದರು.

ಬಿಜೆಪಿ ಪಕ್ಷ ಸೇರ್ಪಡೆಗೊಂಡ ಬಳಿಕ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಯಾವ ಹಿರಿಯ ನಾಯಕರೂ ಸಿಂಧಿಯಾ ಅವರನ್ನು ಸ್ವಾಗತಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಕುಹಕವಾಡಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಘಟಕ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಟ್ವೀಟ್ ಮಾಡದಿರುವುದು ಮಹಾರಾಜರಿಗೆ ಮಾಡಿದ ಅವಮಾನ ಎಂದು ವ್ಯಂಗ್ಯ ಮಾಡಿತ್ತು.

Comments are closed.