ರಾಷ್ಟ್ರೀಯ

ಕೊರೋನಾ: ಕೇರಳ ಆಸ್ಪತ್ರೆಯಿಂದ ಪರಾರಿಯಾಗಿದ್ದ ಅಮೆರಿಕ ದಂಪತಿ ಪತ್ತೆ

Pinterest LinkedIn Tumblr


ತಿರುವನಂತಪುರಂ: ಆಸ್ಪತ್ರೆಗೆ ದಾಖಲಾದ ಬಳಿಕ ಪರಾರಿಯಾಗಿದ್ದ ಅಮೆರಿಕ ಪ್ರಜೆಗಳು ಕೊನೆಗೂ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೆರಿಕದ ಮೂಲದ ದಂಪತಿ ದೋಹಾ ಮೂಲಕ ಮಾರ್ಚ್ 9 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ದಂಪತಿ ಪೈಕಿ ಒಬ್ಬರಲ್ಲಿ ಕೊರೊನಾ ಲಕ್ಷಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲೆಪ್ಪಿ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದರು.

ಆಸ್ಪತ್ರೆ ದಾಖಲಾಗುವಾಗ ನಾವು ಅಮೆರಿಕದ ಪ್ರಜೆಗಳು, ಕಳೆದ ಮೂರು ವರ್ಷಗಳಿಂದ ಲಂಡನ್ ನಲ್ಲಿ ನೆಲೆಸಿದ್ದೇವೆ ಎಂದು ತಿಳಿಸಿದ್ದರು. ಆಸ್ಪತ್ರೆಯ ಸಿಬ್ಬಂದಿ ನಿಮ್ಮನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು. ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಅದರೆ ದಂಪತಿ ಕೊರೊನಾ ಪರೀಕ್ಷೆ ನಡೆಸಲು ಅನುಮತಿ ನೀಡಿರಲಿಲ್ಲ.

ಈ ಸಂಬಂಧ ಪೊಲೀಸರು ಮಾಹಿತಿ ನೀಡಿ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಪರೀಕ್ಷೆಗೆ ವೈರಾಲಜಿ ಆಸ್ಪತ್ರೆಗೆ ದಾಖಲಾಗಬೇಕು, ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಈ ಮಧ್ಯೆ ದಂಪತಿ ಯಾರಿಗೂ ತಿಳಿಸದೇ ಶುಕ್ರವಾರ ಆಸ್ಪತ್ರೆಯಿಂದ ಪರಾರಿಯಾಗಿದ್ದರು. ನಾಪತ್ತೆಯಾದ ಈ ದಂಪತಿ ಪತ್ತೆ ಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

ಇಂದು ಬೆಳಗ್ಗೆ ಈ ದಂಪತಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಈಗ ಆಸ್ಪತ್ರೆಗೆ ದಾಖಲಿಸಿ ನಿಗಾ ಇಡಲಾಗಿದೆ. ದಂಪತಿ ಕ್ಯಾಬ್ ಮೂಲಕ ಪ್ರಯಾಣಿಸಿದ್ದು ಕ್ಯಾಬ್ ಚಾಲಕನನ್ನು ಸಹ ದಾಖಲಿಸಿ ನಿಗಾ ಇಡಲಾಗಿದೆ.

ಕೇರಳದಲ್ಲಿ 19 ಮಂದಿ ಕೊರೊನಾ ಪೀಡಿತರಿದ್ದಾರೆ. ಶುಕ್ರವಾರ ಒಂದು ಕೇಸ್ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಂಖ್ಯೆ 19ಕ್ಕೆ ಏರಿಕೆ ಆಗಿತ್ತು.

Comments are closed.