ರಾಷ್ಟ್ರೀಯ

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ; 175ಕ್ಕೆ ಏರಿಕೆ: ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆ ಮುಂದೂಡಿಕೆ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾಗ್ರಮಾ ಕ್ರಮವಾಗಿ ಪರೀಕ್ಷೆಗಲನ್ನು ಮುಂದೂಡಲಾಗಿದೆ. ಮಾ.31ರ ಬಳಿಕ ಪರೀಕ್ಷೆಗಳನ್ನು ಮತ್ತೆ ಮುಂದುವರೆಸುವುದಾಗಿ, ಈ ಕುರಿತು ಶೀಘ್ರದಲ್ಲಿಯೇ ವೇಳಾಪಟ್ಟೆ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಇದರಂತೆ ಕೌನ್ಸಿಲ್ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಐಸಿಎಸ್ಇ) ಮುಖ್ಯ ಕಾರ್ಯನಿರ್ವಾಹಕರ ಅಧಿಕಾರಿ ಮಾಹಿತಿ ನೀಡಿದ್ದು, ಮಾರ್ಚ್ 19ರಿಂದ 30ರವರೆಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿ ಪ್ರಕಟವಾದ ಬಳಿಕ ಪರೀಕ್ಷೆಗಳನ್ನು ಮತ್ತೆ ನಡೆಸಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.

Comments are closed.