
ನವದೆಹಲಿ: ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಕದಂಬಬಾಹು ಚಾಚುತ್ತಿದ್ದು ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.
ಇಂದು ಮಧ್ಯರಾತ್ರಿಯಿಂದಲೇ ಭಾರತ ಸಂಪೂರ್ಣ ಲಾಕ್ಡೌನ್ ಆಗಲಿದೆ. ಈ ಲಾಕ್ಡೌನ್ ನಿಂದಾಗುವ ನಷ್ಟವನ್ನು ದೇಶ ಭರಿಸಬೇಕಿದೆ. ಆದ್ರೆ ಇಂದು ದೇಶದ ಪ್ರತಿಯೊಬ್ಬರ ಜೀವದ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಇಂದು ನೀವು ದೇಶದ ಯಾವುದೇ ಭಾಗದಲ್ಲಿದ್ದರೂ, ಅಲ್ಲಿಯೇ ಉಳಿದುಕೊಳ್ಳಬೇಕು. ಮುಂದಿನ ಮೂರು ವಾರಗಳ ಕಾಲ ಭಾರತ ಸಂಪೂರ್ಣ ಲಾಕ್ಡೌನ್ ಆಗಲಿದೆ.
ಒಂದು ವೇಳೆ 21 ದಿನದಲ್ಲಿ ನಾವು ಕೊರೊನಾ ವಿರುದ್ಧ ಗೆಲುವು ಸಾಧಿಸದಿದ್ದರೆ, 21 ವರ್ಷಗಳ ಹಿಂದೆ ಭಾರತ ಹೋಗಲಿದೆ. 21 ದಿನ ಮನೆಯಿಂದ ಹೊರ ಬರೋದನ್ನು ಮರೆತು ಬಿಡಿ. ಮನೆಯಲ್ಲಿರಿ, ನಿಮ್ಮ ಮನೆಯಲ್ಲಿರಿ. ನಿಮ್ಮ ಮನೆಯ ಬಾಗಿಲು ಮುಂದೆ ಲಕ್ಷ್ಮಣ ರೇಖೆ ಹಾಕಿಕೊಳ್ಳಬೇಕು.
ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ವೈರಸ್ ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು.
ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿ ಮಧ್ಯರಾತ್ರಿ 12 ಗಂಟೆಯಿಂದ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ನಾವು ಈ ಕ್ಷಣದಿಂದ ಸಂಕಲ್ಪ ಮಾಡೋಣ. ನಮಗೆ ನಾವೇ ಲಕ್ಷ್ಮಣ ರೇಖೆಯನ್ನು ಹಾಕಿಕೊಂಡು ಮನೆಯಲ್ಲೇ ಇರಬೇಕು ಎಂದು ಹೇಳಿದರು.
ಇಂದು ಮಧ್ಯರಾತ್ರಿಯಿಂದ ದೇಶಾದ್ಯಂತ 21 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಇದು ಜನತಾ ಕರ್ಪ್ಯೂಗಿಂತ ಕಠಿಣವಾಗಲಿದೆ. ಒಂದು ರೀತಿಯಲ್ಲಿ ಕರ್ಪ್ಯೂವೇ ಆಗಿರಲಿದೆ. ಇದು ದೇಶದ ಪ್ರತಿ ರಾಜ್ಯ, ಜಿಲ್ಲೆ, ಗ್ರಾಮಗಳಿಗೆ ಅನ್ವಯವಾಗಲಿದೆ ಎಂದರು.
ಈ 21 ದಿನಗಳ ಕಾಲ ನಾವು ಎಚ್ಚರಿಕೆಯಿಂದಿರುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಭಾರತ 21 ವರ್ಷಗಳ ಕಾಲ ಹಿಂದಕ್ಕೆ ಹೋಗುತ್ತದೆ. ಜನರು ಮನೆಯಿಂದ ಹೊರಗೆ ಹೋಗುವ ಒಂದು ಹೆಜ್ಜೆ ಕೂಡ ಕೊರೋನಾದಂತಹ ಗಂಭೀರ ಸಮಸ್ಯೆಗೆ ಆಹ್ವಾನ ನೀಡಬಹುದು.
Comments are closed.