ರಾಷ್ಟ್ರೀಯ

ಕೊರೊನಾ ವಿರುದ್ಧದ ಹೋರಾಟಕ್ಕೆ 15 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ನವದೆಹಲಿ: ಕೊರೊನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ 15 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಭಾರತ ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು ಎಂದು ತಿಳಿಸಿದರು. ಮುಂದಿನ 21 ದಿನಗಳ ಮನೆಯಲ್ಲಿ ಲಕ್ಷ್ಮಣ ರೇಖೆ ಹಾಕಿಕೊಂಡು ಹೊರಗೆ ಬರಬೇಡಿ. 21 ದಿನದ ಈ ಯುದ್ಧದಲ್ಲಿ ನಾವು ಯಶಸ್ವಿಯಾಗದಿದ್ದರೆ, ದೇಶ 21 ವರ್ಷ ಹಿಂದಕ್ಕೆ ಹೋಗಲಿದೆ ಎಂದು ಎಚ್ಚರಿಸಿದರು.

ಕೇಂದ್ರ, ರಾಜ್ಯ ಸರಕಾರಗಳು ಕೈಗೊಂಡಿರುವ ಪ್ರಯತ್ನಗಳ ಕುರಿತು ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವಾಸಿಗಳನ್ನು ಉದ್ದೇಶಿಸಿ ಭಾ‍ಷಣ ಮಾಡಿದರು.

ಮಾರ್ಚ್‌ 24ರ ರಾತ್ರಿ 12 ಗಂಟೆಯಿಂದ ಇಡೀ ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು. ಇದು ಮೂರು ವಾರಗಳ ಕಾಲ ಒಂದು ರೀತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ 15 ಸಾವಿರ ಕೋಟಿ ರೂ. ಪ್ಯಾಕೇಜ್ ನೀಡಲಾಗಿದೆ. ಕೊರೊನಾಗೆ ಸಂಬಂಧಿಸಿದ ವೈದ್ಯಕೀಯ ಸಲಕರಣೆಗಳು, ವೈಯಕ್ತಿಯ ಸಂರಕ್ಷಣಾ ಸಲಕರಣೆಗಳು ((Personal protective Equipment)) ವೆಂಟಿಲೇಟರ್, ಔಷಧಿಗಳು, ಐಸೋಲೇಶನ್ ಬೆಡ್, ಐಸಿಯು ಬೆಡ್ ಮತ್ತು ಚಿಕಿತ್ಸೆಗೆ ಬೇಕಾದ ಅವಶ್ಯಕ ವಸ್ತುಗಳಿಗಾಗಿ ಈ ನಿಧಿಯ ಬಳಕೆಯಾಗಲಿದೆ ಎಂದು ಪ್ರಧಾನಿಗಳು ತಿಳಿಸಿದರು.

ನಿಮ್ಮ ಮೊದಲ ಪ್ರಾಥಮಿಕ ಆದ್ಯತೆ ಸ್ವಸ್ಥ ಆರೋಗ್ಯ ಸೇವೆಗೆ ನೀಡಬೇಕೆಂದು ರಾಜ್ಯ ಸರ್ಕಾರಗಳಿಗೂ ಮನವಿ ಮಾಡಿಕೊಂಡಿದ್ದೇನೆ. ಇಂತಹ ಸಂದರ್ಭಗಳಲ್ಲಿ ಗೊತ್ತಿದ್ದೋ, ಗೊತ್ತಿರದೆಯೂ ಗೊಂದಲ ಉಂಟು ಮಾಡುವ ಸುದ್ದಿಗಳು ಹರಿದಾಡುತ್ತಿರುತ್ತೇವೆ. ಅವುಗಳತ್ತ ಗಮನ ನೀಡದೇ ನೀವೇ ಹಾಕಿಕೊಂಡ ಲಕ್ಷ್ಮಣ ರೇಖೆ ದಾಟಿ ಬರಬೇಡಿ ಎಂದು ಮನವಿ ಮಾಡಿಕೊಂಡರು.

Comments are closed.