ರಾಷ್ಟ್ರೀಯ

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಯುಗಾದಿ ಹಬ್ಬ ಆಚರಿಸಿ: ಪ್ರಧಾನಿ ಮೋದಿ ಮನವಿ

Pinterest LinkedIn Tumblr

ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಡೀ ದೇಶವನ್ನು 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದ್ದು, ಶ್ರೀ ಶಾರ್ವರಿ ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ಜನ ಮನೆಯಲ್ಲೇ ಆಚರಿಸುವ ಮೂಲಕ ಲಾಕ್‌ಡೌನ್‌ಗೆ ಬೆಂಬಲ ನೀಡಿದ್ದಾರೆ.

ಈ ಮಧ್ಯೆ ಯುಗಾದಿ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಮ್ಮ ಒಗ್ಗಟ್ಟು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಎಂದು ಟ್ವೀಟ್ ಮಾಡಿರುವ ಪ್ರಧಾನಿ, ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಯುಗಾದಿ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.

ದೇಶ ಈಗ ಸಂದಿಗ್ಧ ಪರಿಸ್ಥಿತಿಯಲ್ಲಿದ್ದು, ಕೊರೊನಾ ವೈರಸ್ ಎಂಬ ಮಹಾಮಾರಿ ವಿರುದ್ಧ ಸಮರ ಸಾರಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಾವೆಲ್ಲರೂ ಮತ್ತಷ್ಟು ಒಗ್ಗಟ್ಟು ಪ್ರದರ್ಶನ ತೋರುವ ಅವಶ್ಯಕತೆ ಇದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನಾವೆಲ್ಲರೂ ಒಂದಾಗಿ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಸೋಲಿಸೋಣ ಎಂದು ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರತಿಜ್ಞೆ ಮಾಡೋಣ ಎಂದು ಪ್ರಧಾನಿ ಮೋದಿ ಈ ವೇಳೆ ಕರೆ ನೀಡಿದ್ದಾರೆ.

Comments are closed.