
ನವದೆಹಲಿ (ಏ.13): ವಿಶ್ವಾದ್ಯಂತ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇಡೀ ವಿಶ್ವದಲ್ಲಿ 18.5 ಲಕ್ಷ ಜನರಿಗೆ ಕೊರೋನಾ ಅಂಟಿದೆ. ಈ ಮಹಾಮಾರಿ ವೈರಸ್ನಿಂದ 1.14 ಲಕ್ಷ ಮಂದಿ ಅಸುನೀಗಿದ್ದಾರೆ. ಹೀಗಾಗಿ ಕೊರೋನಾ ಅಟ್ಟಹಾಸ ಸದ್ಯದ ಮಟ್ಟಿಗಂತೂ ನಿಯಂತ್ರಣಕ್ಕೆ ಬರುವ ಲಕ್ಷಣ ಗೋಚರವಾಗುತ್ತಿಲ್ಲ.
ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲಿರುವ ಅಮೆರಿಕಕ್ಕೆ ಕೊರೋನಾ ವೈರಸ್ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಗಾಗಲೇ ಅಮೆರಿಕದಲ್ಲಿ 22 ಸಾವಿರ ಜನರು ಕೊರೋನಾದಿಂದ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 5.60 ಲಕ್ಷ ದಾಟಿದೆ. ಅತಿ ಜನ ನಿಬಿಡ ನಗರಗಳಾದ ನ್ಯೂಯಾರ್ಕ್ ಸೇರಿ ಹಲವು ಕಡೆಗಳಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, ಹೀಗಾಗಿ ಈ ವೈರಸ್ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ.
ಸ್ಪೇನ್ ಕೂಡ ಈ ಭೀಕರ ವೈರಸ್ ದಾಳಿಗೆ ತತ್ತರಿಸಿದೆ. 1.66 ಲಕ್ಷ ಜನರಲ್ಲಿ ಕೊರೋನಾ ಸೋಂಕು ಇದೆ. 17 ಸಾವಿರ ಮಂದಿ ಸತ್ತಿದ್ದಾರೆ. ಇಟಲಿಯಲ್ಲಿ 15 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 20 ಸಾವಿರದ ಗಡಿ ತಲುಪಿದೆ. ಫ್ರಾನ್ಸ್, ಜರ್ಮನಿ ಕೂಡ ಈ ವೈರಸ್ಗೆ ನಲುಗಿವೆ.
ಇನ್ನು, ದೇಶಾದ್ಯಂತ ಲಾಕ್ಡೌನ್ ನಡುವೆಯೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 6 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
Comments are closed.