ರಾಷ್ಟ್ರೀಯ

ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​​ ಸಭೆ

Pinterest LinkedIn Tumblr


ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​​ ನೇತೃತ್ವದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಂಬಂಧ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಇಲ್ಲಿನ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳು ಭಾರತಕ್ಕೆ ಸಾಕಷ್ಟು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ಧಾರೆ ಎಂದೇಳಲಾಗುತ್ತಿದೆ.

ಭಾರತದಲ್ಲಿ ಕೊರೋನಾ ಆರ್ಭಟ: ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಹರ್ಷವರ್ಧನ್​​ ಸಭೆ
ಕೇಂದ್ರ ಸಚಿವ ಹರ್ಷವರ್ಧನ್​​

News18 Kannada
Last Updated: April 15, 2020, 5:24 PM IST

Share this:

ನವದೆಹಲಿ(ಏ.15): ವಿಶ್ವಾದ್ಯಂತ ಕೊರೋನಾ ವೈರಸ್​​​ ಮರಣ ಮೃದಂಗ ಭಾರಿಸುತ್ತಿದೆ. ಇದರ ಪರಿಣಾಮ ಭಾರತದಲ್ಲೂ ದಿನದಿಂದ ದಿನಕ್ಕೆ ಕೋವಿಡ್​​-19ಗೆ ಬಲಿಯಾಗುವವರ ಸಂಖ್ಯೆ ಏರುತ್ತಲೇ ಇದೆ. ಈ ಮಧ್ಯೆ ಕೊರೋನಾ ವೈರಸ್​​​ ತಹಬದಿಗೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್​​​ 14ನೇ ತಾರೀಕಿನವರೆಗೂ ಜಾರಿಯಲ್ಲಿದ್ದ 21 ದಿನಗಳ ಕಾಲ ಲಾಕ್​​ಡೌನ್​​ ಅನ್ನು ಪ್ರಧಾನಿ ನರೇಂದ್ರ ಮೋದಿ ಸೂಚನೆ ಮೇರೆಗೆ ಮೇ 3ನೇ ತಾರೀಕುವರೆಗೂ ವಿಸ್ತರಿಸಲಾಗಿದೆ. ಹೀಗಿದ್ದರೂ ಕೊರೋನಾ ವೈರಸ್ ಪ್ರಭಾವ ಮುಂದುವರೆಯುತ್ತಿರುವ ಕಾರಣ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​​ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​​ ನೇತೃತ್ವದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಂಬಂಧ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಇಲ್ಲಿನ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳು ಭಾರತಕ್ಕೆ ಸಾಕಷ್ಟು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ಧಾರೆ ಎಂದೇಳಲಾಗುತ್ತಿದೆ.

ಕೊರೋನಾ ವೈರಸ್ ವಿರುದ್ಧ ಭಾರತದ ವೈದ್ಯರು, ಆರೋಗ್ಯ ಕಾರ್ಯಕರ್ತರು, ದಾದಿಯರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ವೈರಸ್ ಮತ್ತಷ್ಟು ಜೀವ ಹಾನಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಾವು ಒಗ್ಗಟ್ಟು ಪ್ರದರ್ಶನ ಮಾಡಬೇಕು. ನಮಗೆ ವಿಶ್ವ ಆರೋಗ್ಯ ಸಂಸ್ಥೆ ಬೆಂಬಲವಾಗಿ ನಿಂತು ಸಾಂಘಿಕವಾಗಿ ವೈರಸ್ ತೊಲಗಿಸಬೇಕು ಎಂದು ಹರ್ಷವರ್ಧನ್​​ ಅಭಿಪ್ರಾಯಪಟ್ಟಿದ್ದಾರೆ.

ಕಿಲ್ಲರ್ ಕೊರೊನಾ ವೈರಸ್‍ಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ವಿಸ್ತರಿಸಿರುವ ಎರಡನೇ ಹಂತದ ಲೌಕ್‍ಡೌನ್​ಗೆ ಈಗಾಗಲೇ ದೇಶಾದ್ಯಂತ ಹೊಸ ಮಾರ್ಗ ಸೂಚಿಗಳೊಂದಿಗೆ ಜಾರಿಗೆ ಬಂದಿದೆ. ಇದೇ ವೇಳೆ ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿರುವುದರಿಂದ ಜನರು ಭಯ ಭೀತರಾಗಿದ್ದಾರೆ. ಸದ್ಯದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕೃತ ವರದಿ ಪ್ರಕಾರ,ಕೊರೋನಾ ವೈರಸ್​ ಈವರೆಗೆ ದೇಶಾದ್ಯಂತ 377 ಜನರನ್ನು ಬಲಿ ಪಡೆದಿದೆ. ಜತೆಗೆ ಸೋಂಕಿತರ ಸಂಖ್ಯೆ 11,349ಕ್ಕೇರಿದೆ. ಈ ಪೈಕಿ 1,306 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Comments are closed.