ನವದೆಹಲಿ: ದೆಹಲಿಯಲ್ಲಿ ಪಿಜ್ಜಾ ಡೆಲಿವರಿ ಮಾಡುತ್ತಿದ್ದ ಯುವಕನೋರ್ವನಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 72 ಕುಟುಂಬಗಳು ಕ್ವಾರಂಟೈನ್ ನಲ್ಲಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ಹೆಸರಾಂದ ಪಿಜ್ಜಾ ಚೈನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯಲ್ಲಿ ಮಂಗಳವಾರ ವೈರಸ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನೊಂದಿಗೆ ಕೆಲಸ ಮಾಡುತ್ತಿದ್ದ ಇತರೆ 16 ಮಂದಿಯನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಇದೀಗ ಯುವಕ ಪಿಜ್ಜಾ ಡೆಲಿವರಿ ಮಾಡಿದ್ದ ಪ್ರತೀ ಮನೆಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಎಂ. ಮಿಶ್ರಾ ಅವರು ಹೇಳಿದ್ದಾರೆ.
ಯುವಕ ಪಿಜ್ಜಾ ಡೆಲಿವರಿ ಮಾಡಿದ್ದ 72 ಮನೆಗಳನ್ನು ಹುಡುಕಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಸೆಲ್ಫ್ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ. ಆತಂಕಪಡುವ ಅಗತ್ಯವಿಲ್ಲ. ಮಾಸ್ಕ್ ಗಳನ್ನು ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಎಲ್ಲಾ ಡೆಲಿವರಿ ಬಾಯ್ಸ್ ಗಳಿಗೂ ಸೂಚಿಸಲಾಗಿದೆ. ಆದರೂ, ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಪ್ರಸ್ತುತ ಸೋಂಕಿತ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಯುವಕನೊಂದಿಗೆ ಸಂಪರ್ಕ ಹೊಂದಿದ್ದವರಿಗಾಗಿ ಹುಡುಕಾಟ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
Comments are closed.