ರಾಷ್ಟ್ರೀಯ

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ 12,759ಕ್ಕೇ ಏರಿಕೆ: 420 ಮಂದಿ ಸಾವು!

Pinterest LinkedIn Tumblr


ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ 12,759ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರ ತಿಳಿಸಿದೆ.

ಅಧಿಕೃತ ಮಾಹಿತಿಗಳ ಪ್ರಕಾರ, ಒಟ್ಟು ದೇಶದಲ್ಲಿ 10,824 ಕೋವಿಡ್‌-19 ಸಕ್ರಿಯ ಪ್ರಕರಣಗಳಿದ್ದು, 1,514 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಲ್ಲಿ 420 ಮಂದಿ ಕೋರೊನಾ ವೈರಸ್‌ ಸಂಬಂಧಿತ ರೋಗಕ್ಕೆ ಬಲಿಯಾಗಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ರಾಜ್ಯಗಳಲ್ಲಿ ಎಂದಿನಂತೆ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಈ ರಾಜ್ಯದಲ್ಲಿ 2,919 ಕೋವಿಡ್‌-19 ಪ್ರಕರಣಗಳು ಹಾಗೂ 295 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಇದರಲ್ಲಿ 187 ಮಂದಿ ಮೃತಪಟ್ಟಿದ್ದಾರೆ.

ಲಾಕ್‌ಡೌನ್‌ ಉಲ್ಲಂಘಿಸಿ ಪೊಲೀಸರೊಡನೆ ವಾಗ್ವಾದಕ್ಕಿಳಿದ ಬಿಜೆಪಿ ಸಂಸದ!

ರಾಜಧಾನಿ ದೆಹಲಿಯಲ್ಲಿ 1,578 ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗುವ ಮೂಲಕ ಎರಡನೇ ಸ್ಥಾನದಲ್ಲಿದೆ. ತಮಿಳುನಾಡು(1242) ಮತ್ತು ರಾಜಸ್ಥಾನ(1023) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿವೆ.

ದೇಶದಲ್ಲಿಯೇ ಮೊದಲು ಕೊರೊನಾ ವೈರಸ್‌ ಪ್ರಕರಣ ದಾಖಲಾಗಿದ್ದ ಕೇರಳದಲ್ಲಿ 388 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 295 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಶ್ಚಾರ್ಜ್‌ ಆಗಿದ್ದಾರೆ. ದೇವರ ನಾಡಿನಲ್ಲಿ ಇದುವರೆಗೂ ಮೂರು ಸಾವುಗಳು ಸಂಭವಿಸಿವೆ.

ಚತ್ತೀಸಗಢ, ಚಂಡೀಗಢ ಹಾಗೂ ಪುದುಚೇರಿಯಲ್ಲಿ ಕ್ರಮವಾಗಿ 33, 21 ಮತ್ತು 7 ಪ್ರಕರಣಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ 231 ಮತ್ತು ಒಡಿಶಾದಲ್ಲಿ 60 ಪ್ರಕರಣಗಳು ಇದುವರೆಗೂ ಸ್ಪಷ್ಟವಾಗಿವೆ.

ದೇಶವೇ ತಿರುಗಿ ನೋಡುವ ನಿರ್ಧಾರ ತೆಗೆದುಕೊಂಡ ಸಿಎಂ ಪೆಮಾ ಖಂಡು!

ಕೇಂದ್ರಾಡಳಿತ ಪ್ರದೇಶಗಳಾದ ಲಡಾಕ್‌ ಮತ್ತು ಜಮ್ಮು ಕಾಶ್ಮೀರದಲ್ಲಿ ಕ್ರಮವಾಗಿ 17 ಮತ್ತು 300 ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಅಸ್ಸಾಂನಲ್ಲಿ 33, ಮೇಘಾಲಯದಲ್ಲಿ 6, ಮಣಿಪುರ ಮತ್ತು ತ್ರಿಪುರದಲ್ಲಿ ಕ್ರಮವಾಗಿ ಎರಡು ಪ್ರಕರಣಗಳು ದಾಖಲಾಗಿವೆ. ಅರುಣಾಚಲ ಪ್ರದೇಶದಲ್ಲಿ ಒಂದೇ ಒಂದು ಪ್ರಕರಣ ದಾಖಲಾಗಿದೆ. ಇದುವರೆಗೂ ನಾಗಾಲ್ಯಾಂಡ್‌ನಲ್ಲಿ ಒಂದೇ-ಒಂದು ಕೊರೊನಾ ವೈರಸ್‌ ಪ್ರಕರಣ ದಾಖಲಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Comments are closed.