ರಾಷ್ಟ್ರೀಯ

ಏರಿಕೆ ಕಂಡ ಚಿನ್ನದ ಬೆಲೆ

Pinterest LinkedIn Tumblr

ಬೆಂಗಳೂರು: ಚಿನ್ನದ ಬೆಲೆ ಭಾನುವಾರ ಅಲ್ಪ ಏರಿಕೆ ಕಂಡಿದ್ದು, ಗ್ರಾಂ ಚಿನ್ನಕ್ಕೆ 4,221 ರೂ ದಾಖಲಾಗಿದೆ. ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ 3,977ರೂ. ಆಗುವ ಮೂಲಕ ಅಲ್ಪ ಇಳಿಕೆ ಕಂಡಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ 41,160 ರೂ ದಾಖಲಾಗಿದೆ.

ರಾಜಧಾನಿ ದಿಲ್ಲಿಯಲ್ಲಿ 22 ಕ್ಯಾರಟ್‌ ಚಿನ್ನದ ದರವು 10 ಗ್ರಾಮ್‌ಗೆ 41,990 ರೂ. ಮುಟ್ಟಿದೆ. ಬೆಳ್ಳಿ ದರವು 41,160 ರೂ.ಗೆ ತಲುಪಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 39,770ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 41,160 ರೂ. ಆಗಿದೆ.

ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 42,210 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 41,160 ರೂಪಾಯಿ ಇದೆ.

ದೇಶದ ಇತರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 40,940 ರೂಪಾಯಿ ದಾಖಲಾಗಿದೆ. ಬೆಳ್ಳಿ ದರ 41,160 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 40,520 ರೂ ದಾಖಲಾಗಿದೆ. ಒಂದು ಕೆ.ಜಿ. ಬೆಳ್ಳಿ ದರ 41,160 ರೂಪಾಯಿ ಇದೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ – ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

Comments are closed.