
ಹೊಸದಿಲ್ಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,334 ಹೊಸ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 15,712ಕ್ಕೆ ಏರಿಕೆಯಾಗಿದೆ.
ಒಟ್ಟು 15,712 ಸೋಂಕಿತರ ಪೈಕಿ 507 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ವಿಷಯ ತಿಳಿಸಿದ್ದಾರೆ. ಈವರೆಗೆ ದೇಶಾದ್ಯಂತ 2,231 ಮಂದಿ ಕೊರೊನಾ ವೈರಸ್‌ನಿಂದ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ.
ದೇಶದ ಒಟ್ಟು ಕೊರೊನಾ ವೈರಸ್ ಪ್ರಕರಣಗ ಪೈಕಿ ಶೇ. 14.0ರಷ್ಟು ಮಂದಿ ಈವರೆಗೆ ಚೇತರಿಕೆ ಕಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 27 ಮಂದಿ ಮಾರಕ ವೈರಾಣುವಿಗೆ ಜೀವ ತೆತ್ತಿದ್ದಾರೆ. ಸಮಾಧಾನಕರ ಸಂಗತಿ ಎಂದರೆ ಕಳೆದ 28 ದಿನಗಳಲ್ಲಿ ಕರ್ನಾಟಕದ ಕೊಡಗು ಹಾಗೂ ಪುದುಚೆರಿಯ ಮಾಹೆಯಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.
ದೇಶದ 23 ರಾಜ್ಯಗಳ 54 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ದೇಶದಲ್ಲಿ ಒಟ್ಟು 755 ಆಸ್ಪತ್ರೆಗಳನ್ನು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿಯೇ ಸಜ್ಜಗೊಳಿಸಲಾಗಿದೆ.
Comments are closed.