
ನವದೆಹಲಿ: ಕೊರೋನಾ ಮಹಾಮಾರಿ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,334 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 34 ಮಂದಿ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ 17, 615ಕ್ಕೆ ಏರಿಕೆಯಾಗಿದೆ. ಒಟ್ಟಾರೆ 532 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಸದ್ಯ ದೇಶದ ಕೊರೋನಾ ಹಾಸ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 532 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೂ 4,200 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಜರಾತ್ ನಲ್ಲಿ ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆಯಾಗಿದ್ದು ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ 390 ಮುಟ್ಟಿದೆ.
ದೇಶದಲ್ಲಿ ನಿನ್ನೆ 37 ಸಾವಿರ ಮಂದಿಗೆ ಕೊರೋನಾ ಪತ್ತೆ ಪರೀಕ್ಷೆ ನಡೆಸಲಾಗಿದ್ದು ಇದುವರೆಗೂ ಒಟ್ಟು 3.86 ಲಕ್ಷ ಮಂದಿಗೆ ಪರೀಕ್ಷೆ ನಡೆಸಲಾಗಿದೆ.
Comments are closed.