ರಾಷ್ಟ್ರೀಯ

ಲಾಕ್​ಡೌನ್ ಕಾರಣ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲ್ಲ: ಯೋಗಿ ಆದಿತ್ಯನಾಥ್

Pinterest LinkedIn Tumblr


ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ನಿಧನಕ್ಕೆ ಭಾವಪೂರ್ಣ ಸಂತಾಪವನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಲಾಕ್​ಡೌನ್ ಕಾರಣ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲ್ಲ ಎಂದು ಹೇಳಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಷತ್ ಅವರು ಇಂದು ಬೆಳಗ್ಗೆದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೋನಾ ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ದೇಶದೆಲ್ಲೆಡೆ ಲಾಕ್​ಡೌನ್ ಮಾಡಲಾಗಿರುವುದರಿಂದ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಆದಿತ್ಯನಾಥ್ ಅವರು ತಿಳಿಸಿದ್ದಾರೆ.

ಲಾಕ್​ಡೌನ್​ ಮುಗಿದ ಬಳಿಕ ತಮ್ಮ ಊರಿಗೆ ತೆರಳುವುದಾಗಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ.

ತಂದೆಯವರ ನಿಧನ ಸುದ್ದಿ ತುಂಬಾ ಆಘಾತ ಉಂಟು ಮಾಡಿದೆ. ಅವರನ್ನು ಕೊನೆಯದಾಗಿ ಒಮ್ಮೆ ನೋಡಬೇಕು ಎಂದು ಅನಿಸುತ್ತಿದೆ. ಆದರೆ, ಸಾಂಕ್ರಾಮಿಕ ಕಾಯಿಲೆ ವ್ಯಾಪಕವಾಗಿ ಹಬ್ಬಿರುವ ಈ ಸಮಯದಲ್ಲಿ ರಾಜ್ಯದ 23 ಕೋಟಿ ಜನರ ಜವಾಬ್ದಾರಿ ನನ್ನ ಮೇಲಿದೆ. ನಾಳೆ ಏಪ್ರಿಲ್ 21ರಂದು ತಮ್ಮ ತಂದೆಯವರ ಅಂತ್ಯಕ್ರಿಯೆ ನಡೆಯಲಿದೆ. ಆದರೆ, ಲಾಕ್​ಡೌನ್ ವಿಧಿಸಿರುವ ಪರಿಣಾಮ ನಾನು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಲಾಕ್​ಡೌನ್ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡುತ್ತೇನೆ. ಅಂತ್ಯಕ್ರಿಯೆ ವೇಳೆ ಹೆಚ್ಚು ಜನ ಸೇರಬೇಡಿ. ತಂದೆಯವರಿಗೆ ಗೌರವಪೂರ್ವಕ ಅಂತಿಮ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಲಾಕ್​ಡೌನ್ ಮುಗಿದ ಬಳಿಕ ಊರಿಗೆ ತೆರಳುತ್ತೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ತಂದೆ ನಿಧನಕ್ಕೆ ಎಲ್ಲ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ನಿಧನಕ್ಕೆ ಭಾವಪೂರ್ಣ ಸಂತಾಪವನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ತೆರಳಿ ಆನಂದ್ ಸಿಂಗ್ ಬಿಷತ್ ಅವರನ್ನು ಭೇಟಿಯಾಗಿ ಬಂದಿದ್ದರು.

Comments are closed.